ನವದೆಹಲಿ: ಗುಣಮಟ್ಟದ ಪುಸ್ತಕಗಳ ಲಭ್ಯತೆಗೆ ಅನುಕೂಲವಾಗುವಂತೆ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲು ಸರ್ಕಾರ ಪ್ರಸ್ತಾಪಿಸಿದೆ.
ಇದನ್ನೂ ಓದಿ: ಬಜೆಟ್: 5ಜಿ ಬಳಸುವ ಆ್ಯಪ್ ಅಭಿವೃದ್ಧಿಗೆ 100 ಲ್ಯಾಬ್
2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಪ್ರವೇಶಿಸಲು ಮೂಲಸೌಕರ್ಯವನ್ನು ಒದಗಿಸಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು’ ಎಂದು ಹೇಳಿದ್ದಾರೆ.