ಮಂಡ್ಯ: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸಪ್ಪನನ್ನು ಬಂಧಿಸಲಾಗಿದೆ.
ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿ. ಕೆ.ಎಂ. ದೊಡ್ಡಿಯ ಅಸಲಿ ಪೊಲೀಸರು ನಕಲಿ ಪೊಲೀಸ್ನನ್ನು ಬಂಧಿಸಿದ್ದಾರೆ.
ಕೆ.ಎಂ.ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣಾ ಕಾರ್ಯ ಮಾಡುವ ನೆಪದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ಕೆ.ಎಂ.ದೊಡ್ಡಿ ಠಾಣೆಯ ಇನ್ಸ್ಪೆಕ್ಟರ್ ಆನಂದ್ಗೆ ಸಾರ್ವಜನಿಕರು ದೂರು ನೀಡಿದ್ದರು.
ಮಾಹಿತಿ ಬೆನ್ನಲ್ಲೆ ತಕ್ಷಣ ಎಚ್ಚೆತ್ತ ರಿಯಲ್ ಪೊಲೀಸರು ಕಾರ್ಯಾಚರಣೆಗೆ ಇಳಿದು ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೊಬ್ಬ ನಕಲಿ ಪೊಲೀಸ್ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಇದಾದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಎಚ್ಚರಿಕೆ ನೀಡಿ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಿದೆ. (ದಿಗ್ವಿಜಯ ನ್ಯೂಸ್)
ಬೆಂಗ್ಳೂರಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಕೇಸ್! ಕಾರಿನ ಡಿಕ್ಕಿಗೆ ಹಾರಿಹೋಗಿ ಬಿದ್ದ ಮಹಿಳೆ, ಇಬ್ಬರ ಸ್ಥಿತಿ ಗಂಭೀರ
ಪುಲ್ವಾಮಾ ಉಗ್ರದಾಳಿಗೆ ನಾಲ್ಕು ವರ್ಷ: ಇಂದು ಕರಾಳ ದಿನ, ಅಂದು ನಡೆದದ್ದೇನು?
ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್: ಆರ್ಬಿಸಿ ತಂಡ ಸೇರಿದ್ದಕ್ಕೆ ಸ್ಮೃತಿ ಮಂದನಾ ಸಂಭ್ರಮಿಸಿದ ವಿಡಿಯೋ ವೈರಲ್