More

    ಬಜರಂಗದಳ ಬ್ಯಾನ್​| ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ಕ್ರಮ ಜರುಗಿಸುತ್ತೇವೆ, ಇದರಲ್ಲಿ ತಪ್ಪೇನಿದೆ: ಸಿದ್ದರಾಮಯ್ಯ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯರೋಪಗಳಲ್ಲಿ ತೊಡಗಿಸಿಕೊಂಡಿದ್ದಾರೆ.

    ಇನ್ನು ಮಂಗಳವಾರ ಬಿಡುಗಡೆಯಾದ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಬಿಜೆಪಿ-ಕಾಂಗ್ರೆಸ್​ ನಡುವೆ ಜಟಾಪಟಿ ಏರ್ಪಟ್ಟಿದ್ದು ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

    ಇದರಲ್ಲಿ ತಪ್ಪೇನಿದೆ?

    ಈ ಕುರಿತು ಟ್ವೀಟ್​ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ‌ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

    ಬಿಜೆಪಿ ನಾಯಕರಿಗೆ ನೋವ್ಯಾಕೆ

    ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯ.

    ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜ ಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts