ಹಿರೀಸಾವೆ: ಇಲ್ಲಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಭಾಗ್ಯಲಕ್ಷ್ಮೀ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾದರು.
ಮಂಜುಳಾ ಅಣ್ಣಯ್ಯ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ಪ್ರಕ್ರಿಯೆ ನಡೆಯಿತು.
ಪಂಚಾಯಿತಿಯಲ್ಲಿ 23 ಸದಸ್ಯರಿದ್ದು, ಜೆಡಿಎಸ್ ಬೆಂಬಲಿತ 19, ಕಾಂಗ್ರೆಸ್ ಬೆಂಬಲಿತ 4 ಸದಸ್ಯರಿದ್ದಾರೆ. ಭಾಗ್ಯಲಕ್ಷ್ಮೀ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿರಲಿಲ್ಲ.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುನಿಲ್ ಕುಮಾರ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪಿಡಿಒ ದರ್ಶನ್, ಕಾರ್ಯದರ್ಶಿ ಚೇತನ್ ಇದ್ದರು.