ಲಾಹೋರ್: ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರನ್ನು ಅರೆಸೇನಾ ಪಡೆಗಳು ವಶಕ್ಕೆ ಪಡೆದಿವೆ.
ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ನ ಕೋರ್ಟ್ ಆವರಣದಲ್ಲಿ ವಶಕ್ಕೆ ಙಡೆಯಲಾಗಿದೆ ಎಂದು ಸ್ಥಳೀಯ ಸಂಸ್ಥೆಗಳು ವರದಿ ಮಾಡಿವೆ.
ಇದನ್ನೂ ಓದಿ: ಮಗು ಹೆರಲಿಲ್ಲ ಎಂಬ ಕಾರಣಕ್ಕೆ ವಿಷ ಉಣಿಸಿ ಹತ್ಯೆ ಮಾಡಿದ ಕುಟುಂಬಸ್ಥರು!
ಪ್ರತಿಭಟನೆಗೆ ಕರೆ
ಈ ಕುರಿತು ಪ್ರತಿಕ್ರಿಯಿಸಿರುವ ಇಮ್ರಾನ್ ಖಾನ್ ಆಪ್ತ ಫವಾದ್ ಚೌಧರಿ ಇಸ್ಲಾಮಾಬಾದ್ ಹೈಕೋರ್ಟ್ಅನ್ನು ರೇಂಜರ್ಗಳು ಆಕ್ರಮಿಸಿದ್ದು ವಕೀಲರಿಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ. ಇಮ್ರಾನ್ ಖಾನ್ ಅವರ ಕಾರನ್ನು ಭದ್ರತಾ ಪಡೆಗಳು ಸುತ್ತುವರೆದಿವೆ ಎಂದು ಆರೋಪಿಸಿದ್ದಾರೆ.
ಪಕ್ಷದ ನಾಯಕರು ಕೂಡಲೇ ಪಾಕಿಸ್ತಾನದಾದ್ಯಂತ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಕರೆ ನೀಡಿದ್ದಾರೆ.