More

    ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದು ಹತ್ಯೆ!

    ಕೊಲ್ಲಂ: ವೈದ್ಯಕೀಯ ಚಿಕಿತ್ಸೆಗೆಂದು ಪೊಲೀಸರು ಕರೆತಂದಿದ್ದ ಆರೋಪಿಯೊಬ್ಬ ಚಿಕಿತ್ಸೆ ನೀಡುತ್ತಿದ್ದ ವ್ಯದ್ಯೆಯನ್ನು ಇರಿದು ಕೊಂದಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ.

    ವೈದ್ಯೆ ವಂದನಾ ದಾಸ್​(22) ಮೃತ ದುರ್ದೈವಿ ಎಂದು ತಿಳಿದು ಬಂದಿದ್ದು ಆರೋಪಿ ಸಂದೀಪ್(42)​ಗೆ ಚಿಕಿತ್ಸೆ ನೀಡುವ ವೇಳೆ ಇರಿದು ಕೊಂದಿದ್ದಾನೆ.

    ರಾಜ್ಯಾದ್ಯಂತ ಪ್ರತಿಭಟನೆ

    ವೈದ್ಯೆಯ ಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯಾದ್ಯಂತ ಡಾಕ್ಟರ್​ಗಳು ಮುಷ್ಕರಕ್ಕೆ ಮುಂದಾಗಿದ್ದು ಮೇ 11ರಂದು ಒಂದು ದಿನದ ಧರಣಿಗೆ ಕರೆ ನೀಡಿದ್ಧಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಇಂಡಿಯನ್​ ಮೆಡಿಕಲ್​ ಅಸೋಸಿಯೇಷನ್​(IMA) ಅಧ್ಯಕ್ಷ ಡಾ. ಸುಲ್ಫಿ ನುಹೂ ಕಳೆದ ಕೆಲ ಸಮಯದಿಂದ ವೈದ್ಯರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಸರ್ಕಾರ ಕೂಡ ಕಠಿಣ ಕಾನೂನು ಜಾರಿಗೆ ತರುವ ಮೂಲಕ ಅಪರಾಧಿಗಳಿಗೆ ಶಿಕ್ಷೆ ನೀಡುವುದಾಗಿ ಹೇಳುತ್ತಿದೆ.

    doctors Protest

    ಆದರೆ, ಸರ್ಕಾರ ಹೇಳಿದ ಹಾಗೆ ಯಾವುದು ನಡೆಯುತ್ತಿಲ್ಲ. ಕೇರಳದಲ್ಲಿ ಇದೇ ಮೊದಲ ಬಾರಿಗೆ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರನನ್ನು ಹತ್ಯೆ ಮಾಡಿರುವುದು ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: 30 ವಿದ್ಯುನ್ಮಾನ ಮತಯಂತ್ರಗಳಲ್ಲಿ ತಾಂತ್ರಿಕ ದೋಷ; ಎಚ್ಚೆತ್ತ ಅಧಿಕಾರಿಗಳು

    ಚಿಕಿತ್ಸೆ ನೀಡುವ ವೇಳೆ ಕೃತ್ಯ

    ಆರೋಪಿ ಸಂದೀಪ್​ ನೆರೆಹೊರೆಯವರ ಜೊತೆ ಜಗಳವಾಡಿ ತೀವ್ರವಾಗಿ ಗಾಯಗೊಂಡು ಪೊಲೀಸರ ಸುಪರ್ದಿಯಲ್ಲಿದ್ದ. ಗಾಯಗೊಂಡಿದ್ದ ಆತನನ್ನು ಪೊಲೀಸರು ಹೆಚ್ಚಿನ ಚಿಕಿತ್ಸೆ ಕೊಡಿಸಲೆಂದು ಪೊಲೀಸರು ಕೊಟ್ಟಾರಕಂನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

    ಆರೋಪಿ ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದ ಕಾರಣ ವೈದ್ಯೆ ಚಿಕಿತ್ಸೆ ನೀಡಿ ಡ್ರೆಸ್ಸಿಂಗ್​ ಮಾಡುತ್ತಿದ್ದರು. ಈ ವೇಳೆ ಆರೋಪಿ ಪಕ್ಕದ ಟೇಬಲ್​ನಲ್ಲಿ ಇಟ್ಟಿದ್ದ ಸಲಕರಣೆಗಳನ್ನು ತೆಗೆದುಕೊಂಡು ಪೊಲೀಸರಿಗೆ ಬೆದರಿಸಿ ವಂದನಾಗೆ ಹಲವಾರು ಬಾರಿ ಇರಿದು ಕೊಂದಿದ್ದಾನೆ.

    ಈ ವೇಳೆ ಆರೋಪಿಯನ್ನು ಹಿಡಿಯಲು ಮುಂದಾದ ಪೊಲೀಸ್​ ಹಾಗೂ ವೈದ್ಯರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಪೊಲೀಸರು ಹಾಗೂ ಆಸ್ಪತ್ರೆಯಲ್ಲಿದ್ದ ಇತರರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದು ವಶಕ್ಕೆ ಪಡೆದಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts