More

    ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ; ಡಿಕೆಶಿಗೆ ತಮಿಳುನಾಡು ಸಚಿವ ಕಿವಿಮಾತು

    ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಹೇಳಿದ್ದಾರೆ.

    ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ದೊರೈ ಮುರುಗನ್​ ಮೇಕೆದಾಟು ಯೋಜನೆಯನ್ನು ತಮಿಳುನಾಡು ಜನತೆ ಹಾಗೂ ಸರ್ಕಾರ ವಿರೋಧಿಸುವುದಾಗಿ ಪುನರುಚ್ಚರಿಸಿದ್ದಾರೆ.

    ಆಶ್ಚರ್ಯವೆನಿಸಿದೆ

    ಅಧೀಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲೇ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಆಶ್ವರ್ಯಕರವೆನಿಸಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸಮರ್ಪಕವಾಗಿ ಮಾಹಿತಿ ನೀಡಿಲ್ಲ ಎಂದು ಕಾಣುತ್ತದೆ.

    Mekedatu
    ಮೇಕೆದಾಟು ಸಂಗ್ರಹ ಚಿತ್ರ

    ಇದನ್ನೂ ಓದಿ: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು: ಸಿಎಂ ಸಿದ್ದರಾಮಯ್ಯ

    ನಾನು ಈ ವಿಚಾರದ ಕುರಿತು ಶಿವಕುಮಾರ್​ ಅವರನ್ನು ಭೇಟಿ ಮಾಡಿ ವಿವರಿಸುತ್ತೇನೆ ಅಲ್ಲಿಯವರೆಗೂ ಅವರು ತಾಳ್ಮೆಯಿಂದ ಇರುತ್ತಾರೆ ಎಂದು ಭಾವಿಸುತ್ತೇನೆ.

    ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಗೆದ್ದು ಅಧಿಕಾರದ ಗದ್ದುಗೆ ಏರಿದ ವಿಚಾರವಾಗಿ ಶಿವಕುಮಾರ್​ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಯೋಜಿಸಿದ್ದೆ. ಈಗ ಅವರ ಆಕ್ರಮಣಕಾರಿ ನಡವಳಿಕೆಯಿಂದ ಪ್ರಕಟಣೆ ಮೂಲಕ ಶುಭಾಶಯವನ್ನು ಕೋರುತ್ತಿದ್ದೇನೆ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts