More

    ಜನಸ್ನೇಹಿ ಸೇವೆ ಸಲ್ಲಿಸಲು ಸಿದ್ಧರಾಗಿ, ಅಧಿಕಾರಿಗಳಿಗೆ ಸಚಿವ ಲಾಡ್ ಸೂಚನೆ

    ಅಳ್ನಾವರ: ರಾಜ್ಯ ಸರ್ಕಾರದ ಉದ್ದೇಶದಂತೆ ಜನಸ್ನೇಹಿ ಸೇವೆ ಸಲ್ಲಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.


    ಮಂಗಳವಾರ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.


    ಕೃಷಿ ಇಲಾಖೆಯ ಚಟುವಟಿಕೆಗಳ ಬಗ್ಗೆ ಸರಿಯಾಗಿ ಅಂಕಿ ಸಂಖ್ಯೆ ನೀಡಬೇಕು. ಜಿಲ್ಲಾ ಪಂಚಾಯಿತಿ ರಸ್ತೆಗಳನ್ನು ದುರಸ್ತಿಗೊಳಿಸಿ ಜಲಜೀವನ ಕಾಮಗಾರಿ ಬಗ್ಗೆ ಸೂಕ್ತ ಮಾಹಿತಿ. ಪಟ್ಟಣ ಸಹಿತ ಗ್ರಾಮೀಣ ಪ್ರದೇಶಗಳಲ್ಲಿ ಬೇಡಿಕೆ ಇರುವ ವಸತಿ ಮನೆಗಳ ಮಾಹಿತಿ ಸಂಗ್ರಹಿಸಿ, ಪ್ರಮುಖ ಕೆರೆಗಳ ದುರಸ್ತಿ ಕಾರ್ಯಕ್ಕೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ವಸತಿ ನಿಲಯಗಳ ಬಗ್ಗೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ದರ್ಜೆಗೆ ಬೇಕಾದ ಕ್ರಿಯಾಯೋಜನೆ ರೂಪಿಸಬೇಕು ಎಂದು ಹೇಳಿದರು.

    ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿಕಾರಿಗಳು ಯಾವುದೇ ಒತ್ತಡ ಇಲ್ಲದೆ ಕಾರ್ಯ ನಿರ್ವಹಿಸಬೇಕು ಎಂದರು.
    ತಹಸೀಲ್ದಾರ್ ಬಸವರಾಜ ಬೆನ್ನಿಶಿರೂರ. ತಾಪಂ ಇಒ ಸಂತೋಷ ತಳಕಲ್ಲ, ಮುಖ್ಯಾಧಿಕಾರಿ ಪ್ರಕಾಶ ಮಗದುಮ, ಪಿಎಸ್‌ಐ ಪ್ರವೀಣ ನೇಸರ್ಗಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.


    ಪಟ್ಟಣ ಪಂಚಾಯಿತಿ ಸದಸ್ಯರಿಂದ ಸಚಿವರಿಗೆ ಪೌರ ಸನ್ಮಾನ ನೀಡಲಾಯಿತು .ನಂತರ ಉಮಾ ಭವನದಲ್ಲಿ ಸಾರ್ವಜನಿಕರಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.


    ಅಂಗನವಾಡಿ ಹಾಗೂ ಶಾಲೆಗಳಿಗೆ ನೂತನ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿ. ಸರ್ಕಾರಿ ನೌಕರರ ವಸತಿಗಾಗಿ ಪಟ್ಟಣದ ವ್ಯಾಪ್ತಿಯಲ್ಲಿ 25 ಎಕರೆ ಭೂಮಿಯನ್ನು ಗುರುತಿಸಿ ಖರೀದಿಸಲು ಅಧಿಕಾರಿಗಳು ಯೋಜನೆ ಸಿದ್ಧಪಡಿಸಬೇಕು. – ಸಂತೋಷ ಲಾಡ್, ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts