More

    ಕಾಂಗ್ರೆಸ್ ಆಕಾಶದಲ್ಲಿ ಇದೆ, ನಾವು ನೆಲದಲ್ಲಿ ಇದ್ದೇವೆ: ಮಾಜಿ ಸಿಎಂ ಎಚ್​ಡಿಕೆ

    ಬೆಂಗಳೂರು: ಕಾಂಗ್ರೆಸ್ ಪಕ್ಷ ಗೆಲುವಿನ ಅಮಲಿನಲ್ಲಿ ಆಕಾಶದಲ್ಲಿ ಇದೆ. ನಾವು ನೆಲದಲ್ಲಿ ಇದ್ದೇವೆ. ನಾವು ಆಕಾಶಕ್ಕೆ ಏರಲು ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟಿದ್ದಾರೆ.

    ಜಮ್ಮು-ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಎಚ್​ಡಿಕೆ ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

    ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ

    ಎಲ್ಲರೂ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆಯೇ ಮಾತನಾಡುತ್ತಿದ್ದಾರೆ. ಎಲ್ಲಿಗೆ ಬರುತ್ತೆ ಎಂದು ನೋಡೋಣ. ನಾವು ಕಾಂಗ್ರೆಸ್ ಜೊತೆ ರಾಜಕೀಯದಲ್ಲಿ ಭಾಗಿಯಾಗಲು ಆಗುತ್ತಾ ಕಾಂಗ್ರೆಸ್​ನವರು ನಮ್ಮನ್ನು ಲೆಕ್ಕಕ್ಕೂ ಇಟ್ಟಿಲ್ಲ. ಕಾಂಗ್ರೆಸ್‌ ನವರು ಆಕಾಶದ ಮೇಲೆ ಇದ್ದಾರೆ, ನಾವು ಭೂಮಿ ಮೇಲೆ ಇದ್ದೇವೆ. ಅಂತಹವರ ಜೊತೆ ನಾವು ಚರ್ಚೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

    ಜನ ಅವರಿಗೆ ಸಂಪೂರ್ಣ ಆಶೀರ್ವಾದ ಮಾಡಿದ್ದಾರೆ. ಅವರನ್ನು ಮತ್ತೆ ಜನ ಆಕಾಶದಿಂದ ಕೆಳಗೆ ಇಳಿಸಬೇಕು ಅಲ್ವಾ? ಅವರು ಭೂಮಿಗೆ ಬರುವ ತನಕ ನಾವು ಕಾಯಬೇಕು ತಾನೇ. ನಾವು ಆಕಾಶಕ್ಕೆ ಏರಲು ಆಗುತ್ತಾ ಭೂಮಿಯಲ್ಲಿ ಇದ್ದೇವೆ. ನೋಡೋಣ ಕಾಯೋಣ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

    ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗುತ್ತದೆ

    ಕಾಂಗ್ರೆಸ್​ ಗ್ಯಾರಂಟಿಗಳು ಕುರಿತು ಸಚಿವ ಚೆಲುವರಾಯಸ್ವಾಮಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಚುನಾವಣೆಗಾಗಿ ಜನರ ಮತ ಪಡೆಯಲು ಅಂತಹ ಸಂದರ್ಭದಲ್ಲಿ ಚೀಪ್ ಗಿಮಿಕ್ ಸರ್ವೆ ಸಾಮಾನ್ಯ. ಆ ವಿಡಿಯೋ ನಾನು ನೋಡಿದ್ದೇನೆ, ಕೇಳಿಸಿಕೊಂಡಿದ್ದೇನೆ. ಸತ್ಯಾಂಶಗಳು ಒಂದೊಂದೇ ಹೊರಗೆ ಬರುತ್ತಿವೆ.

    HDK

    ವೋಟ್ ಪಡೆಯಲು ನಾಡಿನ ಜನತೆಯನ್ನು ಯಾವ ರೀತಿ ದಾರಿ ತಪ್ಪಿಸಿದ್ದೇವೆ ಎಂದು ಅವರೇ ಹೇಳಿಕೊಂಡಿದ್ದಾರೆ. ಕೊನೆಪಕ್ಷ ಹೀಗೆ ಸತ್ಯ ಒಪ್ಪಿಕೊಳ್ಳುವ ಮೂಲಕ ತಮ್ಮ ಅಸಲಿ ಸಾಚಾತನ ತೋರಿಸುತ್ತಿದ್ದಾರೆ ಎಂದು ಕುಟುಕಿದ್ಧಾರೆ.

    ಇದನ್ನೂ ಓದಿ: VIDEO| ಹಾಲು ತರಲು ಹೋದ ವಕೀಲೆಯನ್ನು ಗುಂಡಿಕ್ಕಿ ಹತ್ಯೆ!

    ಕಣ್ಣಿಗೆ ಕಟ್ಟಿದಂತೆ ಹೇಳಿದ್ದಾರೆ

    ರಾಜ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಉಪ ಮುಖ್ಯಮಂತ್ರಿ ಅವರು ಕಣ್ಣಿಗೆ ಕಟ್ಟಿದಂತೆ ಹೇಳಿದ್ದಾರೆ. ಇವತ್ತು ಜಲಮಂಡಳಿ ನೌಕರರಿಗೆ ಸಂಬಳ ಕೊಡು ದುಡ್ಡು ಇಲ್ಲ. ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದಾರೆ.

    ಈಗಾಗಲೇ ವಿದ್ಯುತ್​ ದರ ಹೆಚ್ಚಿಸಿರುವ ಸರ್ಕಾರ ಈಗ ನೀರಿನ ಬಿಲ್​ ಹೆಚ್ಚಳ ಮಾಡುವುದಾಗಿ ಪರೋಕ್ಷವಾಗಿ ಸುಳಿವು ನೀಡಿದೆ. ಅಲ್ಲಿಗೆ ಈ ಸರಕಾರದ ನಿಜ ಬಣ್ಣ ಏನು ಎನ್ನುವುದು ಜನರಿಗೆ ಅರ್ಥವಾಗುತ್ತಿದೆ. ಒಂದು ಕೈಯ್ಯಲ್ಲಿ ಕೊಡೋದು, ಎರಡು ಕೈಯ್ಯಲ್ಲಿ ಕಿತ್ತುಕೊಳ್ಳೋದು. ಇದು ಈ ಸರಕಾರದ ಸಾಮಾಜಿಕ ನ್ಯಾಯ ಎಂದು ಕಿಡಿಕಾರಿದ್ಧಾರೆ.

    ಕಾಂಗ್ರೆಸ್ ಒಂದು ಕಡೆ ಗ್ಯಾರಂಟಿ ಎನ್ನುವುದು ಎಲ್ಲರಿಗೂ ಉಚಿತ ಖಚಿತ ಎಂದು ಹೇಳುತ್ತಿದ್ದರು. ಈಗ ಅದರ ಜತೆಗೆ ದರ ಏರಿಕೆಯೂ ಖಚಿತ ಆಗಿದೆ. ಈಗ ಬೆಲೆ ಏರಿಕೆಯೂ ನಿಶ್ಚಿತ ಎಂದು ಹೇಳುತ್ತಿದ್ದಾರೆ. ಬೆಲೆ ಏರಿಕೆ ಗ್ಯಾರಂಟಿಯೇ ಜನರಿಗೆ ಗಟ್ಟಿ. ಜನರಿಗೆ ಇನ್ನು ಯಾವ ಯಾವ ಕೊಡುಗೆ ಕೊಡುತ್ತಾರೆ ಎಂದು ಸ್ವಲ್ಪ ದಿನ ಕಾದು ನೋಡೋಣ ಎಂದು ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts