More

    ರೈತರಿಗೆ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಯತ್ನ

    ನ್ಯಾಮತಿ: ತಾಲೂಕಿನಲ್ಲಿ ಮಳೆ ಕೊರತೆ ಉಂಟಾಗಿದ್ದು, ಸರ್ಕಾರಕ್ಕೆ ಸಮೀಕ್ಷಾ ವರದಿ ಕಳಿಸಿ ರೈತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದರು.

    ತಾಲೂಕಿನ ತೀರ್ಥರಾಮೇಶ್ವರ ಪುಣ್ಯಕ್ಷೇತ್ರದಲ್ಲಿ 25ಲಕ್ಷ ರೂ. ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ, ನಂತರ ಮಲ್ಲಿಗೇನಹಳ್ಳಿ ಗ್ರಾಮಸ್ಥರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

    ಈಗಾಗಲೇ ಹಲವು ಗ್ರಾಮಗಳ ಜಮೀನುಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ಮಾಡುತ್ತಿದ್ದೇನೆ. ಅಧಿಕಾರಿಗಳ ಸಮೀಕ್ಷೆ ನಂತರ ಅಂತಿಮ ಪಟ್ಟಿ ತಯಾರಿಸಿ ಸರ್ಕಾರಕ್ಕೆ ಕಳಿಸಿಕೊಡುವುದಾಗಿ ತಿಳಿಸಿದರು.

    ಬೆಳಗುತ್ತಿ ಗ್ರಾಪಂ ಅಧ್ಯಕ್ಷೆ ನಾಗರತ್ನಮ್ಮ, ಉಪಾಧ್ಯಕ್ಷರಾದ ಎಂ.ಎಲ್.ರಂಗನಾಥ, ಸದಸ್ಯರಾದ ಬಿ.ಟಿ.ಕುಬೇರಪ್ಪ, ರೇಖಾ, ಎ.ಕೆ.ಶಂಕ್ರಪ್ಪ, ಎ.ಕೆ.ಚಂದ್ರಪ್ಪ, ಜಿ.ಎಚ್.ಪರಮೇಶ್ವರಪ್ಪ, ತೀರ್ಥಲಿಂಗಪ್ಪ, ದೇವಸ್ಥಾನ ಸಮಿತಿ ಅಧ್ಯಕ್ಷರಾದ ಹರೀಶ್, ಚನ್ನಪ್ಪ ಅರಸ್, ಪ್ರಕಾಶ್, ಮುಖಂಡರಾದ ಟಿ.ಚಂದ್ರಪ್ಪ ಸೇರಿದಂತೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts