ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ದಾಳಿ ಮಾಡಿದೆ.
2020-21ರ ಅವಧಿಯಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಓಕ್ಲಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಮಾನತುಲ್ಲಾ ಖಾನ್ ಅವರ ಮನೆ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ಪಾಕಿಸ್ತಾನಿ ಆ್ಯಂಕರ್ ಗಡಿಪಾರು ವಿವಾದ; ಬಯಲಾಯ್ತು ಅಸಲಿ ಕಾರಣ
ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಹಾಗೂ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ. ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ CBI FIR ದಾಖಲಿಸಿವೆ.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರಾದ ಸಂಜಯ್ ಮಿಶ್ರಾ ಹಾಗೂ ಮನೀಶ್ ಸಿಸೋಡಿಯಾ ಈಗಾಗಲೇ ತನಿಖಾ ಸಂಸ್ಥೆಯಲ್ಲಿನ ವಶದಲ್ಲಿದ್ಧಾರೆ.