ಜೈಪುರ: ಇಲ್ಲಿನ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನದ ಫಲವಾಗಿ ರಾಜಸ್ಥಾನ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ಎದುರು ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡವು ಆರಂಭಿಕ ವೈಫಲ್ಯದ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಿಯಾನ್ ಪರಾಗ್ (84 ರನ್, 45 ಎಸೆತ, 7 ಬೌಂಡರಿ, 6 ಸಿಕ್ಸರ್) ಅರ್ಧಶತಕದ ಫಲವಾಗಿ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 185 ರನ್ ಗಳಿಸಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್ (4-0-24-1), ಮುಖೇಶ್ ಕುಮಾರ್ (4-0-49-1), ಎನ್ರಿಚ್ ನೋಕಿಯಾ (4-0-48-1), ಅಕ್ಷರ್ ಪಟೇಲ್ (4-0-21-1), ಕುಲದೀಪ್ ಯಾದವ್ (4-0-41-1) ರನ್ ನೀಡಿ ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ: ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಪ್ರಜ್ವಲ್ ರೇವಣ್ಣ; ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ
186 ರನ್ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡೇವಿಡ್ ವಾರ್ನರ್ (49 ರನ್, 34 ಎಸೆತ, 5 ಬೌಂಡರಿ, 3 ಸಿಕ್ಸರ್), ಟ್ರಿಸ್ಟನ್ ಸ್ಟಬ್ಸ್ (44 ರನ್, 23 ಎಸೆತ, 2 ಬೌಂಡರಿ, 3 ಸಿಕ್ಸರ್) ಪ್ರತಿರೋಧದ ಹೊರತ್ತಾಗಿಯೂ ಅಂತಿಮವಾಗಿ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ 12 ರನ್ಗಳ ಸೋಲೊಪ್ಪಿಕೊಂಡಿತ್ತು.
ರಾಜಸ್ಥಾನ ಪರ ನಂಡ್ರೆ ಬರ್ಗರ್ (3-0-29-2), ಯಜುವೇಂದ್ರ ಚಹಲ್ (3-0-19-2), ಆವೇಶ್ ಖಾನ್ (4-0-29-1), ಟ್ರೆಂಟ್ ಬೌಲ್ಟ್ (3-0-29-0), ರವಿಚಂದ್ರನ್ ಅಶ್ವಿನ್ (3-0-30-0), ಸಂದೀಪ್ ಶರ್ಮಾ (4-0-36-0) ರನ್ ನೀಡಿ ವಿಕೆಟ್ ಪಡೆಯುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.