ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಐಪಿಎಲ್ ಪಂದ್ಯದಲ್ಲಿ ಎದುರಾಳಿ ತಂಡದ ಬ್ಯಾಟ್ಸ್ಮನ್ಗಳನ್ನು ಅಲ್ಪಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಆರ್ಆರ್ ಬೌಲರ್ಗಳು ಯಶಸ್ವಿಯಾಗಿದ್ಧಾರೆ. ಸತತ ಸೋಲುಗಳಿಂದ ಕಂಗೆಟ್ಟಿರುವ ಹಾರ್ದಿಕ್ ಪಾಂಡ್ಯ ಪಡೆಗೆ ಈ ಪಂದ್ಯದಲ್ಲೂ ಹಿನ್ನಡೆ ಅನುಭವಿಸುವ ಭೀತಿ ಎದುರಿಸುತ್ತಿದ್ದು, ಇದರ ನಡುವೆಯೆ ಮಾಜಿ ನಾಯಕ ರೋಹಿತ್ ಶರ್ಮಾ ಅನಪೇಕ್ಷಿತ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡದ ಬೌಲರ್ಗಳು ಮೊದಲ ಓವರ್ನಿಂದಲೇ ಎದುರಾಳಿ ತಂಡದ ಬ್ಯಾಟ್ಸ್ಮನ್ಗಳ ಮೇಲೆ ಕಡಿವಾಣ ಹೇರುವಲ್ಲಿ ಯಶಸ್ವಿಯಾದರೂ. ಮುಂಬೈ ತಂಡಕ್ಕೆ ವೇಗಿ ಟ್ರೆಂಟ್ ಬೌಲ್ಟ್ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಮೊದಲ ಓವರ್ನಲ್ಲೇ ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ನಮನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು.
ಈ ಪಂದ್ಯದಲ್ಲಿ ರೋಹಿತ್ ಶರ್ಮಾ ತಾವು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರು. ಈ ಮೂಲಕ ರೋಹಿತ್ ಐಪಿಎಲ್ನಲ್ಲಿ ಅತಿ ಹೆಚ್ಚು ಗೋಲ್ಡನ್ ಡಕ್ಗಳಿಗೆ ಔಟಾದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ಬಳಿಕ ನಾಲ್ಕನೇ ಕ್ರಮಾಂಕದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್ ಕೂಡ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈನ ಟಾಪ್ ಮೂವರು ಬ್ಯಾಟರ್ಗಳು ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು.
ಇದನ್ನೂ ಓದಿ: IPL 2024; ಪ್ಲೇಆಫ್ಗೇರುವ ನಾಲ್ಕು ತಂಡಗಳನ್ನು ಹೆಸರಿಸಿದ ಜಂಬೋ
ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಸೊನ್ನೆಗೆ ಔಟಾಗುವ ಮೂಲಕ ಐಪಿಎಲ್ನಲ್ಲಿ ಬೇಡದ ದಾಖಲೆಯೊಂದನ್ನು ಬರೆದಿದ್ದಾರೆ. ರೋಹಿತ್ ಶರ್ಮಾ ಐಪಿಎಲ್ನಲ್ಲಿ ಇದುವರೆಗೆ 17 ಬಾರಿ ಗೋಲ್ಡನ್ ಡಕ್ನಲ್ಲಿ ಔಟಾಗಿದ್ದಾರೆ. ರೋಹಿತ್ಗಿಂತ ಮೊದಲು ಆರ್ಸಿಬಿಯ ದಿನೇಶ್ ಕಾರ್ತಿಕ್ ಕೂಡ ಐಪಿಎಲ್ನಲ್ಲಿ 17 ಬಾರಿ ಶೂನ್ಯಕ್ಕೆ ಔಟಾಗಿದ್ದು, ಜಂಟಿಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.
ಈಗಾಗಲೇ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಸತತ ಸೋಲನ್ನು ಕಂಡಿರುವ ಮುಂಬೈ ಇಂಡಿಯನ್ಸ್ಗ ರಾಜಸ್ಥಾನ ವಿರುದ್ಧದ ಪಂದ್ಯದಲ್ಲೂ ಕಂಬ್ಯಾಕ್ ಮಾಡುತ್ತದ ಅಥವಾ ಹ್ಯಾಟ್ರಿಕ್ ಸೋಲಿಗೆ ಶರಣಾಗುತ್ತದ ಎಂದು ಕಾದು ನೋಡಬೇಕಿದೆ.