More

    ಭದ್ರತಾ ಕೊಠಡಿ ಸೇರಿದ ಮತ ಯಂತ್ರಗಳು

    ದಾವಣಗೆರೆ : ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿ ಎಲೆಕ್ಟ್ರಾನಿಕ್ ಮತ ಯಂತ್ರಗಳು ದಾವಣಗೆರೆ ವಿಶ್ವವಿದ್ಯಾಲಯದ ಭದ್ರತಾ ಕೊಠಡಿಯನ್ನು ಸೇರಿಕೊಂಡಿವೆ.
     ಮತ ಎಣಿಕೆ ಜೂನ್ 4 ರಂದು ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಆ ಕಟ್ಟಡದಲ್ಲಿ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ.
     ಎಂಟು ವಿಧಾನಸಭಾ ಕ್ಷೇತ್ರಗಳಿಗೂ ಭದ್ರತಾ ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕೊಠಡಿಗಳು ಹಾಗೂ ಅಂಚೆ ಮತಗಳಿಗೂ ಭದ್ರತಾ ಕೊಠಡಿಗಳನ್ನು ಮಾಡಲಾಗಿದೆ. ಕಣ್ಗಾವಲಿಗಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವ್ಯವಸ್ಥೆಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ತಿಳಿಸಿದರು.
     ಒಟ್ಟು 3 ಸ್ತರಗಳಲ್ಲಿ ಭದ್ರತೆಯನ್ನು ಕಲ್ಪಿಸಲಾಗಿದೆ. ಕೇಂದ್ರೀಯ ಪ್ಯಾರಾ ಮಿಲಿಟರಿ ಪಡೆ, ಸಶಸ್ತ್ರ ಪೊಲೀಸರು ಹಾಗೂ ಸ್ಥಳೀಯ ಪೊಲೀಸರನ್ನು ಒಳಗೊಂಡು 100 ಜನ ಸಿಬ್ಬಂದಿ ದಿನದ 24 ಗಂಟೆ ಭದ್ರತೆ ಒದಗಿಸಲಿದ್ದಾರೆ. ಒಬ್ಬರು ಡಿವೈಎಸ್ಪಿ, ಇಬ್ಬರು ಸಿಪಿಐಗಳೂ ಇರುತ್ತಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts