More

    ಕೀಟಜನ್ಯ ರೋಗಗಳ ನಿಯಂತ್ರಣಕ್ಕೆ ಬೇಕು ಸಹಕಾರ

    ದಾವಣಗೆರೆ : ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂೆ ಇನ್ನಿತರ ಕಾಯಿಲೆಗಳ ನಿಯಂತ್ರಣಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ. ಗಂಗಾಧರ್ ಹೇಳಿದರು.
     ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ಮಲೇರಿಯಾ, ಡೆಂೆ ರೋಗಗಳ ಭೀತಿ ಇದ್ದು, ಜನರು ಆರೋಗ್ಯದ ಕಡೆ ಗಮನ ಹರಿಸಬೇಕು. ತಮ್ಮ ಮನೆ ಹಾಗೂ ಸುತ್ತಲಿನ ಪರಿಸರದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ತಡೆಗಟ್ಟಬೇಕು ಎಂದು ಮನವಿ ಮಾಡಿದರು.
     ರಾಷ್ಟ್ರೀಯ ಡೆಂೆ ದಿನದ ಅಂಗವಾಗಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಶುಕ್ರವಾರ ನಗರದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9.30ಕ್ಕೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಜಾಥಾಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
     ಜಿಲ್ಲೆಯಲ್ಲಿ 2017ರಲ್ಲಿ 818 ಡೆಂೆ ಪ್ರಕರಣ ವರದಿಯಾಗಿದ್ದವು. 2018ರಲ್ಲಿ 121, 2019ರಲ್ಲಿ  322, 2020ರಲ್ಲಿ 144, 2021ರಲ್ಲಿ 287, 2022ರಲ್ಲಿ 240, 2023ರಲ್ಲಿ 29 ಹಾಗೂ ಈ ವರ್ಷ ಏಪ್ರಿಲ್‌ವರೆಗೆ 87 ಪ್ರಕರಣಗಳು ಪತ್ತೆಯಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ವಿವರಿಸಿದರು.
     ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಡೆಂೆ ರಥ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಆಡಿಯೋ ಮತ್ತು ಫಲಕ ಪ್ರದರ್ಶನದೊಂದಿಗೆ ಜಾಗೃತಿ ಮೂಡಿಸಲಾಗುವುದು. ಡೆಂೆ ನಿಯಂತ್ರಣಕ್ಕಾಗಿ ಜಾಥಾ, ರ‌್ಯಾಲಿ, ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ, ಪಿಡಿಒಗಳಿಗೆ ತಾಲೂಕು ಮಟ್ಟದಲ್ಲಿ ಅರ್ಧ ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಲು ಸೂಚನೆ ನೀಡಲಾಗಿದೆ ಎಂದರು.
     ಮಲೇರಿಯಾ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಶೀಘ್ರ ಪತ್ತೆ ಸಂಪೂರ್ಣ ಚಿಕಿತ್ಸೆ, ಎಲ್ಲ ಹಂತಗಳಲ್ಲಿ ವಲಸಿಗರ ಕಣ್ಗಾವಲು, ವಿವಿಧ ಕಾರ್ಯಕ್ರಮಗಳ ಮೂಲಕ ಜಾಗೃತಿ, ಲಾರ್ವಾಗಳ ನಿಯಂತ್ರಣಕ್ಕೆ ಮೀನುಗಳನ್ನು ಕೆರೆ, ಹೊಂಡ, ಬಾವಿ, ನೀರಿನ ದೊಡ್ಡ ತೊಟ್ಟಿಗಳಲ್ಲಿ ಬಿಡುವುದು ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು. ಇಲಾಖೆಯ ಡಾ.ಮುರಳೀಧರ, ಡಾ. ಸತೀಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts