More

    ಸಚಿವ ಸಿ.ಟಿ.ರವಿ ರಾಜೀನಾಮೆಗೆ ದಲಿತ ಸಂಘರ್ಷ ಸಮಿತಿ ಮುಖಂಡರ ಒತ್ತಾಯ

    ಚಿಕ್ಕಮಗಳೂರು: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಬದಲಾವಣೆಗೆ ಆಗ್ರಹಿಸುತ್ತಿರುವವರ ಬಂಧನ ಹಾಗೂ ಅನುದಾನ ತಡೆದಿರುವ ಜಿಲ್ಲಾ ಉಸ್ತುವಾರಿ ಸಚಿವರ ರಾಜೀನಾಮೆಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರು ಅಪರ ಜಿಲ್ಲಾಧಿಕಾರಿ ಡಾ. ಕುಮಾರ್​ಗೆ ಸೋಮವಾರ ಮನವಿ ಸಲ್ಲಿಸಿದರು.

    ಡಿಎಸ್​ಎಸ್ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಮಾತನಾಡಿ, ಜ.10ರಿಂದ 12ರವರೆಗೆ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಲ್ಕುಳಿ ವಿಠ್ಠಲ್ ಹೆಗ್ಡೆ ಅವರನ್ನು ಆಯ್ಕೆ ಮಾಡಿರುವುದು ಉತ್ತಮ ನಿರ್ಧಾರ. ಆದರೆ ಸಂಘ ಪರಿವಾರದವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅವರು ಸಮ್ಮೇಳನಾಧ್ಯಕ್ಷರನ್ನು ವಿರೋಧಿಸಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದರು.

    ಸಮ್ಮೇಳನಕ್ಕೆ ಅನುದಾನ ನೀಡದಂತೆ ಸಿ.ಟಿ.ರವಿ ತಡೆದಿದ್ದಾರೆ. ಅವರು ಆಡಳಿತ ವ್ಯವಸ್ಥೆ ಗೌರವಿಸುತ್ತಿಲ್ಲ ಎಂದು ಹರಿಹಾಯ್ದರು. ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಮನವಿ ಮಾಡಿದರು.

    ನಲ್ಲೂರು ಪುಟ್ಟಸ್ವಾಮಿ, ಎಂ.ಎಸ್.ಶೇಖರ್, ಕೆರೆಮಕ್ಕಿ ಈರೇಶ್, ಎಂ.ಎಸ್.ಶೇಖರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts