More

    ಹಾರ-ಕೇಕ್ ಬದಲು ದವಸ-ಧಾನ್ಯ ತನ್ನಿ

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸರಳತೆಯಿಂದಲೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡ ನಟ. ಯಾವುದೇ ದುಂದುವೆಚ್ಚ, ಅದ್ದೂರಿತನಕ್ಕೆ ಆಸ್ಪದ ಕೊಡದೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡು ಬಂದವರು. ಈ ಬಾರಿಯೂ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ಅಭಿಮಾನಿಗಳಿಗೆ ಸಂದೇಶ ಕಳುಹಿಸಿರುವ ಅವರು, ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಬದಲು ಅದೇ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸೋಣ ಎಂದು ಕರೆ ನೀಡಿದ್ದಾರೆ.

    ಕಳೆದ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಹಾರ, ಕೇಕ್ ತರುವ ಬದಲು ಕೈಲಾದಷ್ಟು ಅಕ್ಕಿ, ರಾಗಿ, ಬೇಳೆ ತನ್ನಿ, ಅವುಗಳನ್ನು ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ತಲುಪಿಸೋಣ ಎಂದು ಅಭಿಮಾನಿಗಳಲ್ಲಿ ದರ್ಶನ್ ಮನವಿ ಮಾಡಿದ್ದರು. ಅಭಿಮಾನಿಗಳು ಕೂಡ ಡಿ-ಬಾಸ್ ಮಾತಿನಂತೆಯೇ ನಡೆದುಕೊಂಡಿದ್ದರು. ಈ ವರ್ಷ ಕೂಡ ತಮ್ಮ ಹುಟ್ಟುಹಬ್ಬದ ದಿನ (ಫೆ.16) ದವಸ-ಧಾನ್ಯಗಳನ್ನು ತನ್ನಿ ಎಂದು ನಟ ದರ್ಶನ್ ತಿಳಿಸಿದ್ದಾರೆ. ಅದಕ್ಕೆ ಈಗಾಗಲೇ ಅಭಿಮಾನಿಗಳು ಸ್ಪಂದಿಸಿದ್ದು, ಒಂದಷ್ಟು ದವಸ-ಧಾನ್ಯಗಳನ್ನು ಹಸ್ತಾಂತರಿಸಿದ್ದಾರೆ. ಅಲ್ಲದೆ ಜನ್ಮದಿನಾಚರಣೆ ಸಂದರ್ಭದಲ್ಲಿ ತಮ್ಮ ಮನೆಯ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗಬಾರದು. ಪಟಾಕಿ ಹೊಡೆಯುವುದು, ಕಾಂಪೌಂಡ್ ಹತ್ತುವುದು, ಹೂಕುಂಡಗಳನ್ನು ಬೀಳಿಸುವುದು, ಸ್ವತ್ತುಗಳಿಗೆ ಹಾನಿ ಮಾಡುವುದು ಮುಂತಾದ ಅನುಚಿತ ವರ್ತನೆಗಳಿಗೆ ಅವಕಾಶ ಮಾಡಿಕೊಡಬಾರದು ಎಂಬುದಾಗಿಯೂ ಅವರು ಅಭಿಮಾನಿಗಳನ್ನು ಕೋರಿದ್ದಾರೆ.

    ಇನ್ನು ಪ್ರಾಣಿಪ್ರಿಯರಾಗಿರುವ ದರ್ಶನ್, ಇತ್ತೀಚೆಗೆ ಅಭಿಮಾನಿಗಳೊಂದಿಗೆ ಸೇರಿ ಗೋಶಾಲೆಗಳಿಗೆ ಟ್ರಾ್ಯಕ್ಟರ್​ಗಳಲ್ಲಿ ಮೇವು ಕಳುಹಿಸಿ ಕೊಟ್ಟಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಭಾರಿ ಮೆಚ್ಚುಗೆಗೆ ಪಾತ್ರವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts