ಬೀದರ್: ಲಾರಿ ಹರಿದು ಮೂವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬೀದರ್ ತಾಲೂಕಿನ ರಾಷ್ಟೀಯ ಹೆದ್ದಾರಿ 09ರ ಮಿನಕೇರಾ ಕ್ರಾಸ್ ಬಳಿ ಬುಧವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ.
ಮೃತ ದುರ್ದೈವಿಗಳನ್ನು ಅನ್ಸರ್ ಬಸಂತಪೂರ್, ವಿಜಯ ಕುಮಾರ್ ಬಸಂತಪೂರ್ ಮತ್ತು ಇಸ್ಮೈಲ್ ಎಂದು ಗುರುತಿಸಲಾಗಿದೆ.
ಗೂಡ್ಸ್ ಕ್ಯಾರಿಯರ್ ವಾಹನದಲ್ಲಿ ಈರುಳ್ಳಿ ತುಂಬಿಕೊಂಡು ಹೈದರಾಬಾದ್ಗೆ ಹೊರಟ್ಟಿದ್ದರು. ವಾಹನ ಪಂಕ್ಚರ್ ಆಗಿದ್ದಕ್ಕೆ ಮಿನಕೇರಾ ಕ್ರಾಸ್ ಬಳಿಯ ಫ್ಲೈಓವರ್ ಮೇಲೆ ವಾಹನ ನಿಲ್ಲಿಸಿ ಪಂಕ್ಚರ್ ಜೋಡನೆ ಮಾಡುತ್ತಿದ್ದರು. ಈ ವೇಳೆ ಲಾರಿ ಹರಿದು ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸ ಠಾಣೆಯ ಸಿಪಿಐ ಸಾವಳಗಿ ಹಾಗೂ ಬಗದಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್)