More

    ಸೋನಿಯಾಗಾಂಧಿ ಪಾಲಕರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿದ್ದರೇ? ಇದನ್ನು ಮಲ್ಲಿಕಾರ್ಜುನ ಖರ್ಗೆಯವರು ಸ್ಪಷ್ಟಪಡಿಸಬೇಕು: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

    ನವದೆಹಲಿ:ಕಾಂಗ್ರೆಸ್ ನಾಯಕರು ತುಷ್ಟೀಕರಣ ನೀತಿ ಅನುಸರಿಸುತ್ತಿದ್ದು, ಪದೇಪದೆ ಹಿಂದುಗಳನ್ನು ದೂಷಿಸುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ಹೆಸರನ್ನು “ಮುಸ್ಲಿಂ ಲೀಗ್ ಕಾಂಗ್ರೆಸ್” ಎಂದು ಮರುನಾಮಕರಣ ಮಾಡುವುದು ಒಳಿತು. ಹೀಗೆಂದು ಟೀಕಿಸಿದ್ದಾರೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ.

    ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಹಿಂದುಗಳ ದೂಷಣೆಗೆ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಕ್ಷಮೆಯಾಚಿಸಬೇಕು ಎಂದು ಪಾತ್ರಾ ಆಗ್ರಹಿಸಿದ್ದಾರೆ.

    ಮಹಾರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸಬೇಕು ಎಂಬುದು ಮುಸ್ಲಿಮರ ಇಚ್ಛೆಯಾಗಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷ ಶಿವಸೇನಾ ಜತೆಗೆ ಕೈ ಜೋಡಿಸಿ ಸರ್ಕಾರ ರಚಿಸಲು ನಿರ್ಧರಿಸಿತು ಎಂದು ಕಾಂಗ್ರೆಸ್ ನಾಯಕ ಚವಾಣ್ ಹೇಳುತ್ತಾರೆ. ಅವರ ಈ ನಡೆಯ ಅರ್ಥ ಏನೂ ಅಂದ್ರೆ, ವಿಪಕ್ಷಕ್ಕೆ ಹಿಂದುಗಳು ಸೇರಿ ಬೇರೆ ಧರ್ಮೀಯರು ಏನೂ ಅಲ್ಲ. ಅವರಿಂದ ಆ ಪಕ್ಷಗಳಿಗೆ ಏನೂ ಆಗಬೇಕಾಗಿಲ್ಲ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಪಾತ್ರಾ ಟೀಕಿಸಿದರು.

    ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್​) ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡಿತ್ತೇ ಎಂಬ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಪಾತ್ರಾ, ಇಟೆಲಿ ಮೂಲದ ಸೋನಿಯಾ ಗಾಂಧಿ ಅವರ ಪಾಲಕರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ್ದರೇ? ಮಲ್ಲಿಕಾರ್ಜುನ ಖರ್ಗೆಯವರು ಹೇಳಬೇಕು. ಸದಾ ಹಿಂದುಗಳನ್ನು ದೂಷಿಸುವ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್​ ಅನ್ನು ಮುಸ್ಲಿಂ ಲೀಗ್ ಕಾಂಗ್ರೆಸ್ ಎಂದು ಕರೆಯುವುದು ಒಳಿತು ಎಂದು ಟೀಕಿಸಿದರು. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts