ಬೆಂಗಳೂರು: ಕರೊನಾ ವೈರಸ್ ಹಲವು ರಾಜಕಾರಣಿಗಳಿಗೆ ತಗುಲಿದೆ. ಸಚಿವರು, ಶಾಸಕರು..ಸಂಸದರು ಒಬ್ಬೊಬ್ಬರಾಗಿ ಸೋಂಕಿಗೆ ಒಳಗಾಗುತ್ತಿದ್ದಾರೆ.
ಇದೀಗ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮುನಿರತ್ನ ಅವರಲ್ಲಿಯೂ ಕರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷದವನಾದ ನಾನು, ಇಂದು ಕೊವಿಡ್-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ…ಇಲ್ಲದಿದ್ದರೆ ಕ್ಷಮಿಸಿಬಿಡಿ. ಇಂತಿ ನಿಮ್ಮ ಸೇವಕ ಮುನಿರತ್ನ ಎಂದು ತುಸು ಭಾವನಾತ್ಮಕವಾಗಿ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಕರೊನಾ ಸೋಂಕು; ಸಚಿವ ಶ್ರೀರಾಮುಲು ಮನೆ ಭೇಟಿ ರದ್ದು