

ಆನೇಕಲ್: 120 ಅಡಿ ಉದ್ದದ ತೇರೊಂದು ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.
ತೇರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಹೋಗುತ್ತಿತ್ತು. ಹೀಲಲಿಗೆ ಗ್ರಾಮದಿಂದ ಹುಸ್ಕೂರಿನತ್ತ ತೇರು ಬರುತ್ತಿದ್ದ ವೇಳೆ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ತೇರು ನೆಲಕ್ಕೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ತೇರು ಎತ್ತುಗಳು ಮತ್ತು ಟ್ರಾಕ್ಟರ್‌ಗಳ ನೆರವಿನಿಂದ ಎಳೆದು ತರಲಾಗುತ್ತಿತ್ತು. ಅದೃಷ್ಟವಶಾತ್ ಘಟನೆಯಿಂದ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.