

ಚಿತ್ರದುರ್ಗ: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ಕೊಂದು ಶವ ಬಿಸಾಡಿದ ಅಮಾನವೀಯ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಜಮೀನೊಂದರಲ್ಲಿ 13 ವರ್ಷದ ಬಾಲಕಿ ಶವ ವಿವಸ್ತ್ರವಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲೇ ವ್ಯಕ್ತಿಯೊಬ್ಬನ ಚಪ್ಪಲಿಯೂ ಸಿಕ್ಕಿದೆ. ಶುಕ್ರವಾರ ಮಧ್ಯಾಹ್ನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಅತ್ಯಾಚಾರವೆಸಗಿದ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ, ಎಸ್ಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.