More

    ಬಿಎಸ್​ವೈ-ಹೈಕಮಾಂಡ್ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು… ಬಿಜೆಪಿ ಸಂಸದರಿಂದಲೇ ಹೊರಬಿತ್ತು ಸ್ಫೋಟಕ ಮಾಹಿತಿ

    ಚಾಮರಾಜನಗರ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಸಂಸದರೊಬ್ಬರು ಸ್ಫೋಟಕ ಮಾಹಿತಿ ಹೊರಹಾಕಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

    ಸಿಎಂ ಸ್ಥಾನ ಕುರಿತು ಹೈಕಮಾಂಡ್ ಮತ್ತು ಬಿ.ಎಸ್​.ಯಡಿಯೂರಪ್ಪ ನಡುವೆ 2 ವರ್ಷಕ್ಕೆ ಅಗ್ರಿಮೆಂಟ್ ಆಗಿತ್ತು. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಒಪ್ಪಂದ ಆಗಿತ್ತು. ಒಪ್ಪಂದದ ಪ್ರಕಾರ ಯಡಿಯೂರಪ್ಪ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

    ಮುಖ್ಯ ಹುದ್ದೆಯಲ್ಲಿ 75 ವರ್ಷ ಮೇಲ್ಪಟ್ಟವರು ಇರಬಾರದು ಎಂಬದು ಬಿಜೆಪಿ ಪಕ್ಷದ ನಿಲುವಾಗಿದೆ. ನಿಮಗೆ ವಯಸ್ಸಾಗಿದ್ದರೂ ಮುಖ್ಯಮಂತ್ರಿ ಆಗುವ ಅವಕಾಶ ಕೊಡುತ್ತೇವೆ. ಎರಡು ವರ್ಷದ ಬಳಿಕ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಹೈಕಮಾಂಡ್ ಹೇಳಿತ್ತು. ವಿಶೇಷ ಸಂದರ್ಭದಲ್ಲಿ ಯಡಿಯೂರಪ್ಪ ಸಿಎಂ ಆದರು. ಇದುವರೆಗಿದ್ದ ಉಹಾಪೋಹಕ್ಕೆ ತೆರೆಬಿದ್ದಿದೆ. ಯಡಿಯೂರಪ್ಪ ಮತ್ತು ಹೈಕಮಾಂಡ್ ನಡುವೆ ಆಗಿದ್ದ ಮಾತುಕತೆಯಂತೆ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಈಗ ಒಂದು ಹಂತಕ್ಕೆ ಬಂದಿದೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

    ನಾಯಕತ್ವ ಬದಲಾವಣೆ ಕುರಿತು ಮಾತನಾಡುತ್ತಲೇ ‘ನಿಜಕ್ಕೂ ನಮ್ಮದು ದೌರ್ಭಾಗ್ಯ…’ ಎಂದ ಬಿ.ವೈ. ರಾಘವೇಂದ್ರ

    ರಸ್ತೆಯನ್ನೇ ಸೀಳಿಕೊಂಡು ಹರಿಯುತ್ತಿದೆ ಮಳೆ ನೀರು.. ಖಾನಾಪುರದಲ್ಲಿ ಬದುಕು ಮೂರಾಬಟ್ಟೆ…

    ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

    ಭವಿಷ್ಯ ಕಟ್ಟಿಕೊಳ್ಳಲು ಹುಟ್ಟೂರು ಬಿಟ್ಟು ಬಂದಿದ್ದ ಅಣ್ಣ-ತಂಗಿ ನಿದ್ರೆಯಲ್ಲಿರುವಾಗಲೇ ಹೆಣವಾದರು!

    7 ಗ್ರಾಮಗಳು ಮುಳುಗಡೆ: ಜನರನ್ನು ಸ್ಥಳಾಂತರಿಸುವಾಗ ದೋಣಿ ಮಗುಚಿ ಭಾರಿ ಅನಾಹುತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts