

ಬೆಂಗಳೂರು: ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್)(ಎಸ್ಒಸಿಒ) ಹುದ್ದೆಗಳ ನೇಮಕಾತಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಇದೇ ಮೊದಲ ಬಾರಿಗೆ ಸೀನ್ ಆಫ್ ಕ್ರೈಂ ಆಫೀಸರ್ ನೇಮಕಾತಿ ನಡೆಯುತ್ತಿದೆ.
ಸ್ಥಳ ಪರಿಶೀಲನಾ ಅಧಿಕಾರಿಗಳ 206 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಡಿಸೆಂಬರ್ 17ರ ಬೆಳಗ್ಗೆ 10 ಗಂಟೆಯಿಂದ ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜನವರಿ 15ರ ಸಂಜೆ 6 ಗಂಟೆಗೆ ನಿಗದಿ ಮಾಡಲಾಗಿದೆ. ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಚೇರಿಗಳಲ್ಲಿ ಪಾವತಿಸಲು ಜ.18ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-2294 3346 ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.