16 ವರ್ಷದವನನ್ನು ಪ್ರೀತಿಸಿ ಮದುವೆಯಾದ ಶಿಕ್ಷಕಿ; ಅಪರೂಪದ ಪ್ರಕರಣದ ಬಗ್ಗೆ ಅಧಿಕಾರಿಗಳು ಹೇಳಿದ್ದಿಷ್ಟು

Marriage
Published on

ಮೀರತ್​: ನಮಗೆ ಮಾರ್ಗದರ್ಶನ ನೀಡಿ ಉತ್ತಮ ದಾರಿಯೆಡೆಗೆ ಕೊಂಡೊಯ್ಯಬೇಕಾಗಿರುವ ಶಿಕ್ಷಕರೇ (Teacher) ಹಾದಿ ತಪ್ಪಿದರೆ ಹೇಗಿರುತ್ತಿದೆ ಎಂಬುದಕ್ಕೆ ಈ ಪ್ರಕರಣ ಜೀವಂತ ಸಾಕ್ಷಿಯಾಗಿದೆ. ಉತ್ತರಪ್ರದೇಶದ ಮೀರತ್​ನಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಉತ್ತರಪ್ರದೇಶದ ಮೀರತ್​ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು (Teacher) 16 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ ಮದುವೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮೀರತ್​ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer), ಡಹ್ರಾಡೂನ್​ ಮೂಲದ ಯುವತಿ (Teacher) ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಮೀರತ್​ ಮೂಲದ 16 ವರ್ಷದ ಬಾಲಕನನ್ನು ಪರಿಚಯ ಮಾಡಿಕೊಂಡಿದ್ದಳು. ಇಬ್ಬರ ನಡುವೆ ದಿನ ಕಳೆದಂತೆ ಆತ್ಮೀಯತೆ ಹೆಚ್ಚಿದ್ದು, ಪರಿಚಯ ಪ್ರೀತಿಯಾಗಿ ತಿರುಗಿದೆ. ಕೆಲ ದಿನಗಳ ಹಿಂದೆ ಡೆಹ್ರಾಡೂನ್​ನಿಂದ ಬಂದ ಯುವತಿ (Teacher) ಬಾಲಕನನ್ನು ಗಾಜಿಯಾಬಾದ್​ಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆತನೊಂದಿಗೆ ಮದುವೆ (Marriage) ಮಾಡಿಕೊಂಡಿದ್ದಾಳೆ.

ಈ ವಿಚಾರ ತಿಳಿದ ಬಾಲಕನ ಪೋಷಕರು ನಕಲಿ ದಾಖಲೆ ಸೃಷ್ಟಿಸಿ ತಮ್ಮ ಮಗನನ್ನು ಹೆದರಿಸಿ ಶಿಕ್ಷಕಿ (Teacher) ಮದುವೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ. ಭಾರತೀಯ ಕಾನೂನಿನ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮೀರತ್​ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು (Senior Police Officer) ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net