2500 ಸ್ಮಾರ್ಟ್ ತರಗತಿ ಉದ್ಘಾಟನೆ, 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ

ಬೆಂಗಳೂರು: ಸರ್ಕಾರಿ ಕಾಲೇಜುಗಳ 1.55‌ ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಣೆ, ಸರ್ಕಾರಿ ಕಾಲೇಜುಗಳ 2500 ಸ್ಮಾರ್ಟ್ ತರಗತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು. ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ಲೆಟ್ ವಿತರಿಸಿದರು. ಈ ವೇಳೆ ವಿವಿಧ ಜಿಲ್ಲೆಗಳಿಂದ ಸಚಿವ ಶ್ರೀರಾಮುಲು ಸೇರಿ ಹಲವು ಸಚಿವರು ವರ್ಚುಯಲ್ ಆಗಿ ಪಾಲ್ಗೊಂಡಿದ್ದರು. ಪ್ರಸ್ತುತ 2500 ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಈ ವರ್ಷದಲ್ಲಿ ಇನ್ನೂ ಆರು ಸಾವಿರ ತರಗತಿಯನ್ನು ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗುತ್ತದೆ … Continue reading 2500 ಸ್ಮಾರ್ಟ್ ತರಗತಿ ಉದ್ಘಾಟನೆ, 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ