ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಎಕ್ಸಾಂ ಇಲ್ದೇ ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್​: ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ

ಬೆಂಗಳೂರು: ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಸುರೇಶ್​ ಕುಮಾರ್​, ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿತೀಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷಾ ದಿನಾಂಕವನ್ನು ಪರೀಕ್ಷೆ ಆರಂಭವಾಗುವ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ವಿಚಲಿತರಾಗದೆ ಶ್ರದ್ಧೆಯಿಂದ ಎಂದಿನಂತೆ ವಿದ್ಯಾಭ್ಯಾಸ ಮುಂದುವರಿಸಬೇಕು ಎಂದು ಮನವಿ ಮಾಡಿದರು. … Continue reading ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಎಕ್ಸಾಂ ಇಲ್ದೇ ಪ್ರಥಮ ಪಿಯು ವಿದ್ಯಾರ್ಥಿಗಳು ಪಾಸ್​: ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ