ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆ: 7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

rain bangalore
Published on

ಬೆಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಮೋಡ ಮುಸುಕಿದ ವಾತಾವರಣ, ನಿರಂತರವಾಗಿ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇನ್ನೂ 5 ದಿನ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದ್ದು, ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗಲಿದ್ದು, ಈ ಭಾಗದಲ್ಲಿ 48 ಗಂಟೆ ಕಾಲ ಆರೆಂಜ್​ ಅಲರ್ಟ್, ಜು.20ರಿಂದ 22ರವೆರೆಗೆ ಯೆಲ್ಲೋ ಅಲರ್ಟ್ ಇರಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆಯಾಗಲಿದೆ. ಕಳೆದ ವಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಮಳೆ ತುಸು ಇಳಿಕೆಯಾಗಿದ್ದು, ಕೆಲ ಭಾಗಗಳಲ್ಲಿ ಮಾತ್ರ ಹೆಚ್ಚು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net