More

    ದೇವಸ್ಥಾನ ಜೀರ್ಣೋದ್ಧಾರಕ್ಕೆ ಬಿಡುಗಡೆಯಾಗಿದ್ದ ಅನುದಾನ ಕೊಡೋಕು ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್​!

    ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಬಿಡುಗಡೆಯಾಗಿದ್ದ ಅನುದಾನ ನೀಡಲು ಲಂಚ ಕೇಳಿದ ಮುಜರಾಯಿ ಇಲಾಖೆ ತಹಸೀಲ್ದಾರ್​ ಸೇರಿ ಇಬ್ಬರು ಎಸಿಬಿ ಪೊಲೀಸರ ಬಲೆ ಬಿದ್ದಿದ್ದಾರೆ.
    ತಹಸೀಲ್ದಾರ್​ ದಶರಥ ನಕುಲ ಜಾಧವ ಮತ್ತು ಇವರ ಸಂಬಂಧಿ ಸಂತೋಷ ಕಡೋಲಕರ ಬಂಧಿತರು.

    ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಯೋಜನೆ ಅಡಿಯಲ್ಲಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು.

    ದೇವಸ್ಥಾನದ ಸುಭಾಷ ಗೋಡಕೆ ಎಂಬುವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ತಹಸೀಲ್ದಾರ್​ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಸಂತೋಷ ಕಡೋಲಕರನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಸೀಲ್ದಾರ್​ನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

    ಎಸಿಬಿ ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್​ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್​ಸ್ಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

    ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

    ದೈವಿ ಕಲ್ಲು ಇದ್ದವರ ಬಳಿ ಅದೃಷ್ಟ ಒಲಿಯುತ್ತೆ… ಎಂದು ಯೂಟೂಬ್​ಗೆ ವಿಡಿಯೋ ಹಾಕಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts