ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು: ದೀರ್ಘದಂಡ ನಮಸ್ಕಾರ ಹಾಕಿ ಗ್ರಾಮಸ್ಥರು ಪ್ರಾರ್ಥಿಸಿದರೂ ಫಲ ನೀಡಲಿಲ್ಲ ದೇವರು...

New Project(7)
Published on

ಕಲಬುರಗಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದರು.

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್ವರ(35) ಮೃತರು. ಆ.26ರಂದು ಮಣ್ಣೂರು ಗ್ರಾಮದ ಹೊರವಲಯದಲ್ಲಿ ಬೈಕ್​ನಲ್ಲಿ ತೆರಳುವಾಗ ಅಪಘಾತ ಸಂಭವಿಸಿ ಪರಮೇಶ್ವರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ಪರಮೇಶ್ವರ ಅವರನ್ನ ಕಂಡು ದುಃಖಿಸಿದ ಗ್ರಾಮಸ್ಥರು ಅವರು ಚೇತರಿಸಿಕೊಳ್ಳಬೇಕು, ಜೀವಂತವಾಗಿ ಗ್ರಾಮಕ್ಕೆ ಬರಲೆಂದು ದೇವರದಲ್ಲಿ ಹರಕೆ ಹೊತ್ತು ದೀರ್ಘದಂಡ ನಮಸ್ಕಾರ ಹಾಕಿದ್ದರು. ಶೇಷಗಿರಿ ಗ್ರಾಮದಿಂದ ಮಣ್ಣೂರು ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನದವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಜನರ ಪ್ರಾರ್ಥನೆ ಫಲಿಸಲಿಲ್ಲ. ಪರಮೇಶ್ವರ ಬಾರದ ಲೋಕಕ್ಕೆ ಹೋಗಿದ್ದು, ಇಡೀ ಊರಲ್ಲಿ ಸೂತಕದ ಛಾಯೆ ಆವರಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net