ಭೀಕರ ಅಪಘಾತ: ಎಸ್ಸೆಸ್ಸೆಲ್ಸಿ ಎಕ್ಸಾಂ ಹಾಲ್​ಟಿಕೆಟ್​ ತರಲು ಶಾಲೆಗೆ ಹೊರಟಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು!

accident
Published on

ಯಾದಗಿರಿ: ಎಸ್ಸೆಸ್ಸೆಲ್ಸಿ ಎಕ್ಸಾಂ ಹಾಲ್​ಟಿಕೆಟ್​ ತರಲೆಂದು ಶಾಲೆಗೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಮಾರ್ಗಮಧ್ಯೆ ಅಪಘಾತಕ್ಕೀಡಾಗಿ ಸ್ಥಳದಲ್ಲೇ ದುರಂತ ಅಂತ್ಯಕಂಡ ಘಟನೆ ಸುರಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ.

ಮಂಜುನಾಥ ಕನಕಪ್ಪಹಳ್ಳಿ(16) ಮೃತ ವಿದ್ಯಾರ್ಥಿ. ಪರೀಕ್ಷೆಯ ಪ್ರವೇಶ ಪತ್ರ ತೆಗೆದಿಕೊಳ್ಳಲೆಂದು ಮಂಗಳವಾರ ಬೆಳಗ್ಗೆ ಚಿಕ್ಕನಹಳ್ಳಿ ಗ್ರಾಮದಿಂದ ಬಾಚಿಮಟ್ಟಿ ಗ್ರಾಮದ ಪ್ರೌಢಶಾಲೆಗೆ ಹೋಗುತ್ತಿದ್ದ. ಬಸ್ ಮತ್ತು ಆಟೋ ಇಲ್ಲದ ಕಾರಣ ಟ್ರ್ಯಾಕ್ಟರ್‌ನಲ್ಲಿ ಕುಳಿತು ಶಾಲೆಗೆ ಹೋಗುತ್ತಿದ್ದ.

ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಚಾಲಕನಿಗೂ ಗಾಯವಾಗಿದೆ. ಮಗನ ಶವದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net