ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ ಬುದ್ಧಿಮಾಂದ್ಯ ಮಕ್ಕಳಿಗೆ ನಟ ಭುವನ್ ಪೊನ್ನಣ್ಣ, ನಟಿ ಹರ್ಷಿಕಾ ಪೂಣಚ್ಚ ನೆರವು

poonaccha help
Published on

ಚಾಮರಾಜನಗರ: ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದ 30ಕ್ಕೂ ಹೆಚ್ಚು ಬುದ್ಧಿಮಾಂದ್ಯ ಮಕ್ಕಳಿಗೆ ನಟ ಭುವನ್ ಪೊನ್ನಣ್ಣ ಮತ್ತು ನಟಿ ಹರ್ಷಿಕಾ ಪೂಣಚ್ಚ ನೆರವಿನ ಹಸ್ತ ಚಾಚಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪೃಥ್ವಿ ಬುದ್ಧಿಮಾಂಧ್ಯ ಮಕ್ಕಳ ವಸತಿ ಶಾಲೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಭುವನ್ ಪೊನ್ನಣ್ಣ ಮತ್ತು ಹರ್ಷಿಕಾ ಪೂಣಚ್ಚ ಇಬ್ಬರೂ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಅವರೊಂದಿಗೆ ಮಕ್ಕಳಂತೆ ಕುಣಿದು ನಲಿದರು.

ಇತ್ತೀಚಿಗೆ ಗುಂಡ್ಲುಪೇಟೆಗೆ ತೆರಳಿ ಬುದ್ಧಿಮಾಂಧ್ಯ ಮಕ್ಕಳಿಗೆ ಅಗತ್ಯ ನೆರವು ನೀಡುವುದಾಗಿ ನಟ ಭುವನ್ ಪೊನ್ನಣ್ಣ ಭರವಸೆ ನೀಡಿದ್ದರು. ಅದರಂತೆ ನಿನ್ನೆ ರಾತ್ರಿ ವಸತಿ ಶಾಲೆಗೆ ಭೇಟಿ ನೀಡಿ, ಭುವನಂ ಫೌಂಡೇಷನ್​ನಿಂದ ಎರಡು ತಿಂಗಳಿಗಾಗುವಷ್ಟು ಆಹಾರಧಾನ್ಯ, ನಿತ್ಯೋಪಯೋಗಿ ವಸ್ತುಗಳನ್ನು ವಿತರಿಸಿದರು. ಇದನ್ನೂ ಓದಿರಿ ಮಧುಗಿರಿ ಕರ್ನಾಟಕಕ್ಕೇ ಮಾದರಿ!: ಸೋಂಕಿತ ಶಿಕ್ಷಕರಿಗೆ ಆತ್ಮಸ್ಥೈರ್ಯ ತುಂಬಲು ಯತ್ನ, ವೆಬಿನಾರ್​ನಲ್ಲಿ ಜಾಗೃತಿ

ಬಳಿಕ ಮಾತನಾಡಿದ ನಟ ಭುವನ್ ಮತ್ತು ಪೂಣಚ್ಚ, ಇಲ್ಲಿನ ಬುದ್ಧಿಮಾಂದ್ಯ ಮಕ್ಕಳ ಪರಿಸ್ಥಿತಿ ಶೋಚನೀಯವಾಗಿದೆ. ಸದ್ಯಕ್ಕೆ ತಾತ್ಕಾಲಿಕ ನೆರವು ನೀಡಿದ್ದೇವೆ. ನಮ್ಮ ಸೇವೆಗೆ ಉತ್ತಮ ಅವಕಾಶ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಶಾಲೆಗೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ರಾಜ್ಯದಲ್ಲಿ ಎಲ್ಲಿಯೇ ಇಂತಹ ಪರಿಸ್ಥಿತಿ ಇದ್ದರೂ ನನಗೆ ಕರೆ ಮಾಡಿ ಕೈಲಾದಷ್ಟು ಅವರಿಗೆ ಸಹಾಯ ಮಾಡುತ್ತೇವೆ ಎಂದು ಭುವನ್ ಹೇಳಿದರು.

30ಕ್ಕೂ ಹೆಚ್ಚು ಬುದ್ಧಿಮಾಂದ್ಯ ಮಕ್ಕಳಿರುವ ಈ ವಸತಿ ಶಾಲೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಮಳೆ ಬಂದರೆ ಸೋರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net