ನ.8ರಿಂದ ಅಂಗನವಾಡಿ‌ ಆರಂಭ

anganawadi
Published on

ಕೊಪ್ಪಳ: ರಾಜ್ಯದಲ್ಲಿ ಕರೊನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನ.8ರಿಂದ ರಾಜ್ಯಾದ್ಯಂತ ಅಂಗನವಾಡಿಗಳು ಆರಂಭ ಆಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರೊನಾ ಸೋಂಕಿನ ಭೀತಿಯಿಂದ ಕಳೆದ ಒಂದೂವರೆ ವರ್ಷದಿಂದ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು . ಸದ್ಯ ಕರೊನಾ ಸೋಂಕಿನ ಪ್ರಕರಣ ಇಳಿಕೆ ಆಗುತ್ತಿರುವುದರಿಂದ ಈಗಾಗಲೇ ಶಾಲಾ ಕಾಲೇಜು ಆರಂಭಿಸಿದೆ. ಇಲ್ಲಿವರೆಗೂ ಯಾವುದೇ ವಿದ್ಯಾರ್ಥಿಗಳಿಗೆ ಸೋಂಕು ತಗುಲಿಲ್ಲ. ಈ ನಿಟ್ಟಿನಲ್ಲಿ ನ. 8 ರಿಂದ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಕಳೆದ ಎರಡು ದಿನದಿಂದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ, ಸ್ಯಾನಿಟೈಸ್ ಮಾಡಿ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನ ಮೂರು ಗಂಟೆವರೆಗೂ ಅಂಗನವಾಡಿ ಕೇಂದ್ರ ತೆರೆಯಲಾಗುವುದು. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಟಿಕ ಆಹಾರ ನೀಡಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net