ಕೋರ್ಟ್​ನಲ್ಲಿ ಖಾಲಿ ಇವೆ ಶೀಘ್ರಲಿಪಿಗಾರ ಹುದ್ದೆಗಳು: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

udupi court
Published on

ಬೆಂಗಳೂರು: ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ 8 ಶೀಘ್ರಲಿಪಿಗಾರ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅಂಚೆ ಅಥವಾ ಇತರ ಮಾದರಿಯಲ್ಲಿ ಕಳುಹಿಸಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಲಾಗಿದೆ.

8 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿ (ಮಹಿಳೆ-1, ಗ್ರಾಮೀಣ-1, ಇತರೆ-1) ಗೆ 3 ಸ್ಥಾನ, ಪ್ರವರ್ಗ 1ರಲ್ಲಿ ಮಹಿಳೆಗೆ 1 ಸ್ಥಾನ, ಪ್ರವರ್ಗ 2ಎಗೆ (ಗ್ರಾಮೀಣ-1, ಅಂಗವಿಕಲ-1) -2, ಪ್ರ.2ಬಿಯಲ್ಲಿ ಮಹಿಳೆಗೆ-1, ಪರಿಶಿಷ್ಠ ಜಾತಿಯಲ್ಲಿ ಅಂಗವಿಕಲರಿಗೆ 1 ಸ್ಥಾನ ಮೀಸಲಿರಿಸಲಾಗಿದೆ. ಕನಿಷ್ಠ 18 ವರ್ಷ, ಗರಿಷ್ಠ ಸಾಮಾನ್ಯವರ್ಗದ ಅಭ್ಯರ್ಥಿಗೆ 35 ವರ್ಷ, 2ಎ, 2ಬಿ, 3ಎ, 3ಬಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ಕ್ಕೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ., ಹಾಗೂ ಇತರ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ಅರ್ಹತೆ: ಎಸ್ಸೆಸ್ಸೆಲ್ಸಿ ಉತ್ತೀರ್ಣ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೇಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯವನ್ನು ಐಚ್ಛಿಕ ವಿಷಯವಾಗಿ ಹೊಂದಿರಬೇಕು.

ವೇತನ: ಮಾಸಿಕ 27,650-52,650 ರೂ. ವೇತನ ಜತೆ ಇತರ ಭತ್ಯೆಗಳನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಶೈಕ್ಷಣಿಕ ಅಂಕ ಮತ್ತು ಪ್ರತಿ ನಿಮಿಷಕ್ಕೆ 120 ಪದಗಳ ವೇಗದಲ್ಲಿ 5 ನಿಮಿಷಗಳ ಉಕ್ತಲೇಖನವನ್ನು ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೆಗೆದುಕೊಂಡು, ಉಕ್ತ ಲೇಖನವನ್ನು 45 ನಿಮಿಷಗಳಲ್ಲಿ ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸಯವ ಅಂಕ ಹಾಗೂ ಸಂದರ್ಶನದ ಅಂಕ ಪರಿಗಣಿಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನ: 30.9.2021

ಶುಲ್ಕ ಪಾವತಿಸಲು ಕೊನೆಯ ದಿನ: 4.10.2021

ಅಧಿಸೂಚನೆಗೆ: https://bit.ly/2WOMK8M

ಮಾಹಿತಿಗೆ: districts.ecourts.gov.in

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net