More

    ಮಾಜಿ ಸಂಸದ ಎಚ್​.ಬಿ.ಪಾಟೀಲ ನಿಧನ: ಸ್ವಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ

    ಬಾಗಲಕೋಟೆ: ಮಾಜಿ ಸಂಸದ ಎಚ್​.ಬಿ. ಪಾಟೀಲ ಅವರು ನಿಧನರಾದರು. ಇವರಿಗೆ 80 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ ಅವರನ್ನ ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಮಂಗಳವಾರ ಕೊನೆಯುಸಿರೆಳೆದರು. ಇಂದು(ಬುಧವಾರ) ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಬಾದಾಮಿ ತಾಲೂಕಿನ ರಡ್ಡೇರ ತಿಮ್ಮಾಪುರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪಾಟೀಲ ಅವರಿಗೆ ಪತ್ನಿ, ಐವರು ಪುತ್ರಿಯರು, ಪುತ್ರ ಇದ್ದಾರೆ.

    1942ರ ಮಾರ್ಚ್​ 29ರಂದು ಜನಿಸಿದ ಎಚ್​.ಬಿ. ಪಾಟೀಲ ಅವರು ಸ್ವಗ್ರಾಮದಲ್ಲಿ ಪ್ರಾಥಮಿಕ, ರಾಮದುರ್ಗದಲ್ಲಿ ಮಾಧ್ಯಮಿಕ ಶಿಕ್ಷಣ ಪಡೆದು, ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿಎ, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಸ್ನಾತಕೋತ್ತರ(ಎಂಎ) ಪದವಿ ಪಡೆದಿದ್ದರು. ಶಿಕ್ಷಣ ನಂತರ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು. ನಂತರ ಸ್ನೇಹಿತರ ಒತ್ತಾಯಕ್ಕೆ ಮಣಿದು ಬಾದಾಮಿ ತಾಲೂಕು ಬೋರ್ಡ್​ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ರಾಜಕೀಯ ಪ್ರವೇಶಿಸಿದರು.

    ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ, ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 1984ರ ಡಿಸೆಂಬರ್​ನಲ್ಲಿ ನಡೆದ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯಥಿರ್ಯಾಗಿ ಸ್ಪರ್ಧಿಸಿದ್ದ ಗೆಲುವು ಸಾಧಿಸಿದ್ದರು.

    ಮುದ್ದಹನುಮೇಗೌಡ ಬಿಜೆಪಿ ಅಭ್ಯರ್ಥಿ? ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಲು ಚಿಂತನೆ

    ವಿದೇಶದಲ್ಲಿರುವೆ, ಬೆಂಗಳೂರಿಗೆ ಬಂದು ಮದ್ವೆ ಆಗ್ತೀನಿ… ಎಂದು ಯುವತಿಗೆ ಆಸೆ ಹುಟ್ಟಿಸಿದವ ಮಾಡಬಾರದು ಮಾಡಿಬಿಟ್ಟ

    ಮಕ್ಕಳಾಗದ ನೋವಿನಲ್ಲಿ ಸಾವಿನ ಮನೆಯ ಕದ ತಟ್ಟಿದ ಮಹಿಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts