ಶ್ರೀರಂಗಪಟ್ಟಣದ ಮಸೀದಿ ಕುರಿತು ವಿವಾದಿತ ಹೇಳಿಕೆ: ಕಾಳಿ ಮಠದ ಸ್ವಾಮಿಗೆ ಜಾಮೀನು

blank

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ವಿವಾದಿತ ಹೇಳಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ಅವರಿಗೆ ಬುಧವಾರ ಜಾಮೀನು ಸಿಕ್ಕಿದೆ.

ಮಂಗಳವಾರ ಸ್ವಾಮಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜೆಎಂಎಫ್​ಸಿ ಕೋರ್ಟ್​ ಆದೇಶಿಸಿತ್ತು. ನಿನ್ನೆ ಮಂಡ್ಯ ಜೈಲಿಗೆ ಸ್ವಾಮಿಗಳನ್ನು ಸ್ಥಳಾಂತರಿಸಲಾಗಿತ್ತು. ಇದಕ್ಕೂ ಮುನ್ನ ಜಾಮೀನು ಕೋರಿ ಸ್ವಾಮೀಜಿ ಪರ ವಕೀಲರ ಬಾಲರಾಜ್, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣ ಜೆಎಂಎಫ್​ಸಿ ಕೋರ್ಟ್​, ಆದೇಶ ಕಾಯ್ದಿರಿಸಿತ್ತು. ಇಂದು ಶರತ್ತುಬದ್ಧ ಜಾಮೀನು ನೀಡಿರುವ ನ್ಯಾಯಾಲಯ, ಪ್ರತಿ ಭಾನುವಾರ ಪೊಲೀಸ್​ಠಾಣೆಗೆ ಬಂದು ಸಹಿ ಹಾಕಬೇಕು, ತನಿಖೆಗೆ ಸಹಕಾರ ನೀಡಬೇಕು ಎಂದು ಸೂಚಿಸಿದೆ.

ಏನಿದು ಪ್ರಕರಣ?: ಖಾಸಗಿ ಕಾರ್ಯಕ್ರಮ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಋಷಿ ಕುಮಾರಸ್ವಾಮಿ, ಮಸೀದಿ ಮುಂಭಾಗದಲ್ಲೇ ನಿಂತು ವಿವಾದಿತ ಹೇಳಿಕೆ ಉಲ್ಲೇಖಿಸಿ ವಿಡಿಯೋ ಚಿತ್ರೀಕರಣ ನಡೆಸಿ, ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್​ ಬೋರ್ಡ್​ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್​ ಠಾಣೆಗೆ ಮನವಿ ಮಾಡಿವೆ. ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.

ಈ ಪ್ರಕರಣ ಸಂಬಂಧ ಮಂಗಳವಾರ ಸ್ವಾಮೀಜಿಯನ್ನು ಶ್ರೀರಂಗಪಟ್ಟಣ​ ಠಾಣೆ ಪೊಲೀಸರು ವಶಕ್ಕೆ ಪಡೆದು ಕರೆತಂದಿದ್ದರು. ಠಾಣೆಗೆ ಕರೆತರುವ ಮುನ್ನ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಸ್ವಾಮೀಜಿ, ನಾನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದೆ. ಈ ವೇಳೆ ಅದೇ ರಸ್ತೆಯಲ್ಲಿ ನನ್ನ ಕಣ್ಣಿಗೆ ಕಾಣಿಸಿತು ಅದು ಮಸೀದಿ ಅಲ್ಲ, ನನ್ನ ಹನುಮ ದೇಗುಲ. ಅ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರ. ಅದೇ ರೀತಿ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ‌ ಕಟ್ಟುತ್ತೇವೆ. ಮಸೀದಿ‌ ನನಗೆ ದೇವಾಲಯದ ರೀತಿ‌ ಕಾಣಿಸಿದೆ. ಅದನ್ನೇ ಹೇಳಿದ್ದೇನೆ. ಹಿಂದುಪರ ಸಂಘಟನೆಗಳೆಲ್ಲ ಒಂದಾಗಿರಿ, ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ಟೇ ಕಟ್ಪುತ್ತೀವಿ ಎಂದಿದ್ದರು.

ಮಂಗಳವಾರ ಮಧ್ಯಾಹ್ನ ಕಾಳಿ ಮಠದ ಸ್ವಾಮೀಜಿ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದರು. ವಾದ ವಿವಾದ ಆಲಿಸಿದ್ದ ಸ್ವಾಮಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಇಂದು ಜಾಮೀನು ನೀಡಿದೆ.

ಬಿಗ್​ ಬಾಸ್​ ಖ್ಯಾತಿಯ ದಿವ್ಯಾ ಸುರೇಶ್​ಗೆ ಅಪಘಾತ

ತಂಗಿ ಸತ್ತರೂ ಯಾರಿಗೂ ಹೇಳದೆ 4 ದಿನ ಶವದ ಜತೆ ಒಬ್ಬಳೇ ಇದ್ದ ಅಕ್ಕ! ಇವರಿಬ್ಬರ ಬದುಕೇ ಕರುಣಾಜನಕ

ಶಿಕ್ಷಕಿಗೆ ಒಳ ಉಡುಪು ಗಿಫ್ಟ್​ ಕೊಟ್ಟು ಸುತ್ತಾಡೋಕೆ ಹೊರ ಕರೆದ ಮನೆ ಮಾಲೀಕ… ಒಲ್ಲೆ ಎಂದಾಕೆಗೆ ಕ್ವಾಟ್ಲೆ ಶುರು…

Share This Article

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…