ಶಿವಮೊಗ್ಗ: ನಗರದ ಭಾರತಿ ಕಾಲನಿಯಲ್ಲಿ ಭಾನುವಾರ ರಾತ್ರಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈಗಾಗಲೇ ನಾಲ್ಕೈದು ಆರೋಪಿಗಳ ಸುಳಿವು ಸಿಕ್ಕಿದೆ. ಪೊಲೀಸರು ಬಂಧಿಸಲಿದ್ದಾರೆ. ಘಟನೆ ಬಳಿಕ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಯುವಕನ ಸಾವಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಪೊಲೀಸರು ಆರೋಪಿಗಳ ಬೆನ್ನು ಬಿದ್ದಿದ್ದಾರೆ. ಕಾನೂನು ಮೂಲಕವೇ ಶಿಕ್ಷೆ ಕೊಡಿಸುವ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೃತ ಯುವಕನ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದೇನೆ. ಆತನೂ ಕೆಲವೊಂದು ಪ್ರಕರಣಗಳಲ್ಲಿ ಭಾಗಿ ಆಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ ಬಗ್ಗೆಯೂ ತನಿಖೆ ಆಗಲಿದೆ ಎಂದು ಗೃಹ ಸಚಿವರು ತಿಳಿಸಿದರು.
ಸೀಗೆಹಟ್ಟಿಯ ಹರ್ಷಶೆಟ್ಟಿ (22) ಕೊಲೆಯಾದ ಯುವಕ. ಭಾರತಿ ಕಾಲನಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಚಾಕಿವಿನಿಂದ ಇರಿದಿದ್ದರು. ಗಂಭೀರ ಗಾಯಗೊಂಡಿದ್ದ ಹರ್ಷಶೆಟ್ಟಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿತ್ತಾದರೂ ಬದುಕಲಿಲ್ಲ. ಇದರ ಬೆನ್ನಲ್ಲೇ ಖಾಸಗಿ ಬಸ್ ನಿಲ್ದಾಣದ ಬಳಿ ಕಿಡಿಗೇಡಿಗಳು ವಾಹನಗಳು, ಅಂಗಡಿಮುಂಗಟ್ಟುಗಳಿಗೆ ಕಲ್ಲು ತೂರಾಟ ನಡೆಸಿದ್ದು, ನಗರದಲ್ಲಿ ರಾತ್ರಿ ಪ್ರಕ್ಷ್ಯುಬ್ಧ ವಾತಾವರಣ ಸೃಷ್ಟಿಯಾಗಿತ್ತು.
ಕಂಡ ಕಂಡವರ ಮೊಬೈಲ್ಗೆ ಹಗಲು-ರಾತ್ರಿ ಎನ್ನದೆ ಬೆತ್ತಲೆ ಫೋಟೋ ಕಳಿಸಿ ಖುಷಿ ಪಡ್ತಿದ್ದ… ಈತ ಕೊಟ್ಟ ಕಾಟ ಅಷ್ಟಿಷ್ಟಲ್ಲ
ಥೂ ಇದೆಂಥಾ ಅಸಹ್ಯ? ಅಣ್ಣ-ತಂಗಿ ನಡುವೆಯೇ ಅಕ್ರಮ ಸಂಬಂಧ, ಅಡ್ಡಿಬಂದ ತಾಯಿಯನ್ನೇ ಕೊಂದ ಕಾಮುಕರು!
ತಣ್ಣಗಾಗದ ಹಿಜಾಬ್ ವಿವಾದ: ಶಾಲೆಯಲ್ಲಿ ಸರಸ್ವತಿ ಫೋಟೋ ಬೇಡ ಎಂದ ಮುಸ್ಲಿಂ ವಿದ್ಯಾರ್ಥಿನಿಯ ತಾಯಿ