More

    ಅ.20ಕ್ಕೆ ಎಎಪಿಯಿಂದ ರಸ್ತೆ ಗುಂಡಿಗಳ ಹಬ್ಬ

    ಬೆಂಗಳೂರು: ನಗರದೆಲ್ಲೆಡೆ ರಸ್ತೆ ಗುಂಡಿಗಳು ವಿಪರೀತ ಹೆಚ್ಚಾಗಿ, ಜೀವ ತೆಗೆಯುವಷ್ಟು ಅಪಾಯಕಾರಿ ಮಟ್ಟ ತಲುಪಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿಯು ಬುಧವಾರದಂದು ರಸ್ತೆ ಗುಂಡಿಗಳ ಹಬ್ಬ ಹಮ್ಮಿಕೊಂಡಿದೆ.

    ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರದ ಎಎಪಿ ಅಧ್ಯಕ್ಷರಾದ ಮೋಹನ್‌ ದಾಸರಿ ನೇತೃತ್ವದಲ್ಲಿ ಈ ಅಭಿಯಾನ ನಡೆಯಲಿದೆ. ಅಕ್ಟೋಬರ್‌ 20ರ ಬುಧವಾರ ಬೆಳಗ್ಗೆ 10 ರಿಂದ ಸಂಜೆವರೆಗೆ ಬೆಂಗಳೂರಿನ ಎಲ್ಲ ಹಳೆಯ 198 ವಾರ್ಡ್‌ಗಳಲ್ಲಿ ನಡೆಯುವ ಅಭಿಯಾನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

    ಅಪಾಯಕಾರಿ ಗುಂಡಿಗಳನ್ನು ಗುರುತಿಸಿ, ಅದರ ಸುತ್ತ ರಂಗೋಲಿ ಹಾಕಿ, ದೀಪ ಹಚ್ಚುವ ಮೂಲಕ ರಸ್ತೆಗುಂಡಿಗಳ ಹಬ್ಬ ನೆರವೇರಲಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು 20,000 ಕೋಟಿ ರೂಪಾಯಿಯನ್ನು ಖರ್ಚು ಮಾಡಿದ್ದರೂ ರಾಜಧಾನಿಯ ರಸ್ತೆಗಳು ದುಸ್ಥಿತಿಯಲ್ಲಿ ಇರುವುದರ ಕುರಿತು ಜಾಗೃತಿ ಮೂಡಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜನಪ್ರತಿನಿಧಿಗಳು ತಮ್ಮ ಜೇಬು ತುಂಬಿಸಿಕೊಳ್ಳಲು ಕಳಪೆ ಕಾಮಗಾರಿ ಮಾಡಿರುವುದನ್ನು ಆಮ್‌ ಆದ್ಮಿ ಪಾರ್ಟಿಯು ಜನರ ಮುಂದೆ ಬಯಲು ಮಾಡಲಿದೆ.

    ಸಖತ್ ವೈರಲ್​ ಆಗ್ತಿರೋ ಮದ್ವೆ ಫೋಟೋ ಹಿನ್ನೆಲೆ ಗೊತ್ತಾ? ಯುವತಿ ಹೇಳಿಕೆ ಕೇಳಿದ್ರೆ ಅಚ್ಚರಿಯಾಗೋದು ಖಂಡಿತ!

    ಆತ ಸಲಿಂಗಕಾಮಿ, ಅವನ ಜತೆ ಸಮಂತಾ ಸಂಬಂಧ ಬೆಳೆಸಲು ಸಾಧ್ಯವಿಲ್ಲ: ನಟಿ ಶ್ರೀರೆಡ್ಡಿ ಸ್ಫೋಟಕ ಹೇಳಿಕೆ

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts