More

    ಸಾರ್ವಜನಿಕರಿಂದ ದೂರುಗಳ ಸುರಿಮಳೆ

    ಹನೂರು : ಮಹದೇಶ್ವರಬೆಟ್ಟದ ಕಾಡಂಚಿನ ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ, ಖಾತೆ ಬದಲಾವಣೆಯಲ್ಲಿ ವಿಳಂಬ, ಕಾಡುಪ್ರಾಣಿಗಳ ಹಾವಳಿ, ಬಸ್ ಸೌಕರ್ಯ ಕೊರತೆ, ಸ್ಮಶಾನಕ್ಕೆ ಜಾಗವಿಲ್ಲ, ಚಂಗಡಿ ಗ್ರಾಮಮಸ್ಥರಿಗೆ ಪುನರ್ವಸತಿ ಕಲ್ಪಿಸಿಲ್ಲ, ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಹೀಗೆ ಇನ್ನು ಹತ್ತಾರು ಸಮಸ್ಯೆಗಳು…

    ಇದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಶನಿವಾರ ಶಾಸಕ ಎಂ.ಆರ್.ಮಂಜುನಾಥ್ ಸಮ್ಮುಖ ಹಾಗೂ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿ ಬಂದ ದೂರುಗಳು.

    ಗ್ರಾಮೀಣ ಜನರ ಅಹವಾಲು ಆಲಿಸಿ, ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನಿಂದ ವಿವಿಧ ಗ್ರಾಮದ ಜನರು ಆಗಮಿಸಿದ್ದು, ನೋಂದಣಿ ಮೂಲಕ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 282 ಅರ್ಜಿ ಸ್ವೀಕರಿಸಿಲಾಗಿತು. ಬಳಿಕ ಆಯೋಜಿಸಿದ್ದ ಸಭೆಯಲ್ಲಿ ಪ್ರತಿಯೊಬ್ಬರಿಂದ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದ ಶಾಸಕ ಎಂ.ಆರ್.ಮಂಜುನಾಥ್, ಡಿಸಿ ಶಿಲ್ಪಾನಾಗ್ ಅವರು, ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಗುರುಪ್ರಸಾದ್ ಹಾಗೂ ತಾಪಂ ಇಒ ಉಮೇಶ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸೂಚನೆ ನೀಡಿದರೆ, ಇನ್ನುಳಿದವನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಬೆಳಗ್ಗೆ 11ರಲ್ಲಿ ಆರಂಭವಾದ ಕಾರ್ಯಕ್ರಮವು ಮಧ್ಯಾಹ್ನ 3.15ರ ವೆರೆಗೆ ನಡೆಯಿತು.

    ಅಧಿಕಾರಿಗಳಿಂದ ನಿರ್ಲಕ್ಷೃ: ಸಭೆಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಹನೂರು ಘಟಕಾಧ್ಯಕ್ಷ ಚಂಗಡಿ ಕರಿಯಪ್ಪ ಮಾತನಾಡಿ, ಚಂಗಡಿ ಗ್ರಾಮ ಸ್ಥಳಾಂತರ ಸಂಬಂಧ ಪುನರ್ವಸತಿ ಕಲ್ಪಿಸಲು ಸರ್ಕಾರದಿಂದ 2020ರಲ್ಲೇ ಘೋಷಣೆ ಮಾಡಲಾಗಿದ್ದು, ಸವಲತ್ತು ಕಲ್ಪಿಸಲು ಸ್ಥಳವನ್ನು ಗುರುತಿಸಲಾಗಿದೆ. ಆದರೆ ಯಾವುದೇ ಕ್ರಮವಾಗಿಲ್ಲ. ಇತ್ತ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷೃ ವಹಿಸಿದ್ದಾರೆ ಎಂದು ರೈತರು ಕೃಷಿಯಲ್ಲಿ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರಲ್ಲದೆ, ಮಲೆ ಮಹದೇಶ್ವಬೆಟ್ಟದ ಕಾಡಂಚಿನ ಗ್ರಾಮಗಳಲ್ಲಿ ವಿದ್ಯುತ್, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಮರೀಚಿಕೆಯಾಗಿದೆ. ಇದರಿಂದ ರೈತರು ಕೃಷಿಯಲ್ಲಿ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ಯಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts