

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕುರಿತು ಹೈಕೋರ್ಟ್ ಒಳ್ಳೆಯ ತೀರ್ಪು ನೀಡಿದೆ. ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದು ಇಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು.
ಶಾಂತಿ- ಸೌಹಾರ್ದತೆ ಕಾಪಾಡಬೇಕು. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಈ ತೀರ್ಪನ್ನು ಒಪ್ಪಿಕೊಳ್ಳಬೇಕು. ಇದು ಮಕ್ಕಳ ಭವಿಷ್ಯ ಮತ್ತು ಶಿಕ್ಷಣದ ಪ್ರಶ್ನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಿಜಾಬ್ ವಿವಾದ ಕುರಿತು ಹೈಕೋರ್ಟ್ ಪೂರ್ಣ ಪೀಠ ನೀಡಿದ ಮಹತ್ವದ ತೀರ್ಪು ಕುರಿತು ಪ್ರತಿಕ್ರಿಯಿಸಿದ ಸಿಎಂ, ನ್ಯಾಯಾಲಯದ ತೀರ್ಪಿನ ಅನ್ವಯ ಶಿಕ್ಷಣ ಕೂಡಲು ಎಲ್ಲರೂ ಸಹಕರಿಸಬೇಕು. ಎಲ್ಲ ವಿದ್ಯಾರ್ಥಿಗಳೂ ಹೈಕೋರ್ಟ್ ಆದೇಶ ಪಾಲಿಸಬೇಕು. ತರಗತಿ ಬಹಿಷ್ಕಾರ ಮಾಡದೆ, ಪರೀಕ್ಷೆಯಲ್ಲಿ ಭಾಗವಹಿಸಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡ್ರೆ ಗೃಹ ಇಲಾಖೆಯಿಂದ ತಕ್ಕಪಾಠ ಆಗಲಿದೆ. ಕಾನೂನು ಸುವ್ಯವಸ್ಥೆ ಕದಡಬೇಡಿ ಎಂದು ಎಚ್ಚರಿಕೆ ನೀಡಿದರು.
ಸಮುದಾಯದ ನಾಯಕರಿಗೂ ನಾನು ಮನವಿ ಮಾಡುವೆ. ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ನ್ಯಾಯಾಲಯದ ಆದೇಶ ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದರು.