More

    ಪ್ರಧಾನಿ-ವಿತ್ತ ಸಚಿವೆಗೆ ಧನ್ಯವಾದ ತಿಳಿಸುತ್ತಲೇ ಕೇಂದ್ರ ಬಜೆಟ್​ಗೆ ಮೆಚ್ಚುಗೆ ಸೂಚಿಸಿದ ಬೊಮ್ಮಾಯಿ-ಬಿಎಸ್​ವೈ

    ಬೆಂಗಳೂರು: ಕೇಂದ್ರ ಬಜೆಟ್ ಮಂಡನೆಯಾದ ಬೆನ್ನಲೇ ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಧನ್ಯವಾದ ತಿಳಿಸಿದ್ದಾರೆ. ಇದು ಜನಪರ ಆಯವ್ಯಯ ಎಂದು ಪ್ರಶಂಸಿದ್ದಾರೆ.

    ಇದು ಸಬ್ ಕಾ ಸಾಥ್ ಸಬ್ ಕಾ ವಿಶ್ವಾಸ್ ಬಜೆಟ್. ಆತ್ಮ ನಿರ್ಧಾರ್ ಭಾರತದ ಬಜೆಟ್. ರಾಜ್ಯಕ್ಕೆ ಘೋಷಣೆ ಮಾಡಿರುವ ಯೋಜನೆಗಳಿಂದ ಕರ್ನಾಟಕದ ಅಭಿವೃದ್ಧಿಗೆ ಬೋಸ್ಟ್ ಸಿಕ್ಕಂತಾಗಿದೆ. ನಮಗೆ ನೀಡಿರುವ ಸಂಪನ್ಮೂಲಗಳನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತೇವೆ. ಕೋವಿಡ್ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಉತ್ತಮ ಬಜೆಟ್ ನೀಡಿದೆ. ಆರ್ಥಿಕತೆ ಮೇಲೆ ಕರೊನಾ ಪರಿಣಾಮ ಬೀರಿತ್ತು. ಈಗ ಆರ್ಥಿಕತೆ ವೃದ್ಧಿಸುವ ಕೆಲಸ ಆಗಿದೆ. ಇದು ಆರ್ಥಿಕತೆ ಸ್ಟೇಬಲ್ ಮಾಡುವ ಮತ್ತು ಅಭಿವೃದ್ಧಿ ಪೂರಕವಾದ ಬಜೆಟ್ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

    ನಿರ್ಮಲಾ ಸೀತಾರಾಮನ್ ಮಂಡಿಸಿದ 2022-23ನೇ ಸಾಲಿನ ಬಜೆಟ್​ ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ ತುಂಬುವ ಜತೆಗೆ ಪ್ರಗತಿಗೆ ವೇಗವರ್ಧಕವಾಗಿದೆ. ಸಾಂಕ್ರಾಮಿಕದ ಸವಾಲುಗಳನ್ನು ಹಿಮ್ಮೆಟ್ಟಿಸಿ, ಸ್ವಾವಲಂಬಿ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಸಬ್ ಕಾ ವಿಕಾಸ್ ಬದ್ಧತೆಗೆ ನಿದರ್ಶನ ಎಂದು ಬಿ.ಎಸ್​.ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

    ವಿಶೇಷವಾಗಿ ಕಾವೇರಿ ಸೇರಿದಂತೆ ನದಿಗಳ ಜೋಡಣೆ, ಉದ್ಯೋಗ ಸೃಷ್ಟಿ, 3.8 ಕೋಟಿ ಕುಟುಂಬಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಲು 60,000 ಕೋಟಿ ರೂಪಾಯಿ, ಕೃಷಿ, ಪಿಎಂ ಗತಿಶಕ್ತಿ, ಆರೋಗ್ಯ ಸೇವೆ, ಹೂಡಿಕೆ ಉತ್ತೇಜನ ವಲಯಗಳಿಗೆ ಆದ್ಯತೆ ನೀಡಿರುವುದು ರಾಜ್ಯದ ಬೆಳವಣಿಗೆಗೆ ಗಣನೀಯ ನೆರವು ನೀಡಲಿದೆ ಎಂದು ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ.

    ಕೇಂದ್ರ ಬಜೆಟ್ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ: ಇದು ಉದ್ಯೋಗ, ಮೂಲಸೌಕರ್ಯ, ಅಭಿವೃದ್ಧಿ ಬಜೆಟ್​

    ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರವೆಸಗಿದ್ದ ಎಎಸ್​ಐಗೆ 20 ವರ್ಷ ಜೈಲು! 4 ವರ್ಷದ ಹಿಂದೆ ನಡೆದಿತ್ತು ಹೀನ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts