ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಹತ್ಯೆ!

rekha kadiresh
Published on

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಗುರುವಾರ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರೇಖಾ ಛಲವಾದಿಪಾಳ್ಯದ 138ನೇ ವಾರ್ಡ್​ನ ಸದಸ್ಯೆಯಾಗಿದ್ದರು. ಇವರ ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕದಿರೇಶ್​ರ ಸಹೋದರರು ಮತ್ತು ಸಾರ್ವಜನಿಕರ ಕಣ್ಣೆದುರಲ್ಲೇ ಈ ಹತ್ಯೆ ನಡೆದಿತ್ತು.

ಇಂದು ಬೆಳಗ್ಗೆ ಛಲವಾದಿಪಾಳ್ಯದ ಫ್ಲವರ್​ ಗಾರ್ಡನ್​ನಲ್ಲಿ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ ಕರೆದ ದುಷ್ಕರ್ಮಿಗಳು, ಮನೆ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ರೇಖಾರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್​ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಹಚರರಿಂದಲೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗರದಲ್ಲಿ ಮಾಜಿ‌

ರೇಖಾ ಕದಿರೇಶ್ ಸಹಚರರಿಂದಲೇ ಕೊಲೆ ಮಾಡಿರುವ ಶಂಕೆ

ಛಲವಾದಿಪಾಳ್ಯ ಕಾರ್ಪೊರೇಟ್ ಆಗಿದ್ದ ರೇಖಾ ಕದಿರೇಶ್

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net