More

    ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

    ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಡ್​ ರೂಮಿನಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಕಗ್ಗೊಲೆ ‌ಪ್ರಕರಣದ ಆರೋಪಿ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

    ಘಟನೆ ಹಿನ್ನೆಲೆ: 2015ರ ಆಗಸ್ಟ್ 16ರಂದು ನಸುಕಿನ ಜಾವ ಬೆಳಗಾವಿಯ ಕುವೆಂಪು ನಗರದ ಮನೆಯಲ್ಲಿ ತ್ರಿವಳಿ ಕೊಲೆ ನಡೆದಿತ್ತು. ಗೃಹಿಣಿ ರೀನಾ ಮಾಲಗತ್ತಿ, ಅವರ ಮಕ್ಕಳಾದ ಆದಿತ್ಯ ಹಾಗೂ ಸಾಹಿತ್ಯ ಅವರನ್ನು ಬೆಡ್ ರೂಮಿನಲ್ಲೇ ಕೊಲೆ ಮಾಡಲಾಗಿತ್ತು. ರೀನಾ ಅವರೂಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪ್ರವೀಣ್ ಭಟ್ ಈ ಕೊಲೆ ಮಾಡಿದ್ದಾಗಿ, ರೀನಾ ಅವರ ಸಹೋದರ ದೂರು ದಾಖಲಿಸಿದ್ದರು. ಪೊಲೀಸರು 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಬೆಳಗಾವಿ ಎರಡನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2018ರ ಏಪ್ರಿಲ್ 16ರಂದು ಪ್ರವೀಣ್ ಭಟ್‌ಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

    ಬೆಳಗಾವಿಯಲ್ಲಿ ತ್ರಿವಳಿ ಕೊಲೆ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ‌ಪ್ರವೀಣ್ ಭಟ್​ನನ್ನು ನಿರ್ದೋಷಿ ಎಂದ ಧಾರವಾಡ ಹೈಕೋರ್ಟ್

    ದೇಶದಾದ್ಯಂತ ಸದ್ದು ಮಾಡಿದ್ದ ಈ ತ್ರಿವಳಿ ಕೊಲೆ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಪ್ರವೀಣ್​ ಭಟ್​ಗೆ ಜೀವಾವಧಿ ಶಿಕ್ಷೆ ನೀಡಿತ್ತು. ಈ ಆದೇಶವನ್ನು ತಡೆಹಿಡಿದ ಧಾರವಾಡ ಹೈಕೋರ್ಟ್ ದ್ವಿಸದಸ್ಯ ಪೀಠವು, ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ನೀಡಿ ಆರೋಪಿಯನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿದೆ. ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಅವರು ಜೂ.21ರಂದು ಈ ಆದೇಶ ಹೊರಡಿಸಿದ್ದಾರೆ.

    ಮದ್ವೆಯಾಗಿ ಇಬ್ಬರು ಮಕ್ಕಳಿದ್ರೂ 21 ವರ್ಷದ ಅರ್ಚಕನ ಜತೆ 35ರ ಮಹಿಳೆ ಪರಾರಿ! ಮಧ್ಯರಾತ್ರಿ ಕಾಡಲ್ಲಿ ಈಕೆ ಪಟ್ಟ ಪಾಡು ಅಷ್ಟಿಷ್ಟಲ್ಲ

    ಕೂಲಿ ಕೆಲಸಕ್ಕಾಗಿ ಆಂಧ್ರದಿಂದ ಚಿಕ್ಕಬಳ್ಳಾಪುರಕ್ಕೆ ಬಂದವ ಈಗ ಕೋಟ್ಯಧೀಶ! ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts