More

    ಶಾಸಕ ಹರೀಶ್ ಪೂಂಜಾಗೆ ಜೀವ ಬೆದರಿಕೆ: ತಡರಾತ್ರಿ ಕಾರನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿದ ದುಷ್ಕರ್ಮಿಗಳು


    ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ್ದಾರೆ.

    ಈ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್​ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನ ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದಾರೆ.

    ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಶಾಸಕ ಹರೀಶ್​ ಪೂಂಜಾ ಅವರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.

    ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ 2 ತಿಂಗಳು ಜೈಲು ಶಿಕ್ಷೆ ವಿಧಿಸಿ ಕೋರ್ಟ್​ ಆದೇಶ

    ಬೆಳಗಾವಿಯಲ್ಲಿ ಯುವತಿ ಅನುಮಾನಾಸ್ಪದ ಸಾವು: ಆಕೆಯನ್ನ ಆಸ್ಪತ್ರೆಗೆ ಕರೆತಂದ ಯುವಕ ಪರಾರಿ…

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts