

ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಬಳ್ಳಾರಿ ನಗರದ ಮುನ್ಸಿಪಲ್ ಮೈದಾನದಲ್ಲಿ ಇಂದು(ಶನಿವಾರ)ಬೃಹತ್ ಸಮಾವೇಶ ನಡೆಯುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್, ಚತ್ತೀಸ್ಗಡ ಮುಖ್ಯಮಂತ್ರಿ ಬೂಪೇಶ್ ಬಾಬಲೆ, ಡಿಕೆಶಿ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡೇ ನೆರೆದಿದೆ. ಲಕ್ಷಾಂತರ ಜನ ಪಾಲ್ಗೊಂಡಿದ್ದಾರೆ.