ಬಳ್ಳಾರಿಯಲ್ಲಿ ಭಾರತ್​ ಜೋಡೋ ಯಾತ್ರೆ ಸಮಾವೇಶ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲರವ

rahul gandhi bharath jodo yatre
Published on

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬಳ್ಳಾರಿಯಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಕಾಂಗ್ರೆಸ್​ನ ಬೃಹತ್​ ಸಮಾವೇಶ ನಡೆಯುತ್ತಿದೆ.

ನಗರದ ಮುನ್ಸಿಪಲ್​ ಮೈದಾನದಲ್ಲಿ ನಡೆಯುತ್ತಿರುವ ಬೃಹತ್​ ಸಮಾವೇಶದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್​, ಚತ್ತೀಸ್​ಗಡ ಮುಖ್ಯಮಂತ್ರಿ ಬೂಪೇಶ್​ ಬಾಬಲೆ, ಎಐಸಿಸಿ ಪ್ರಮುಖರಾದ ಕಮಲ್​ ನಾಥ್​, ದಿಗ್ವಿಜಯ್​ ಸಿಂಗ್​, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್​, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್​ ಸೇರದಿಂತೆ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದಾರೆ. ರಾಹುಲ್​ ಗಾಂಧಿ ಅವರನ್ನ ನೋಡಲು ವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಜನರು ಆಗಮಿಸಿದ್ದರಿಂದ ಬೇಸರ ಕಳೆಯಲು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿವಿಧ ಕಲಾ ತಂಡಗಳು ಹಲವು ಗಂಟೆಗಳ ಕಾಲ ನಿರಂತರ ಕಾರ್ಯಕ್ರಮ ನೀಡಿ ರಂಜಿಸಿದವು. ನಟ ಪುನೀತ್ ರಾಜ್​ಕುಮಾರ್ ಅವರ 'ಬೊಂಬೆ ಹೇಳುತೈತೆ...' ಹಾಡಿಗೆ ಜನರು ಮೊಬೈಲ್ ಟಾರ್ಚ್ ಆನ್ ಮಾಡಿ ತಾವೂ ದನಿಗೂಡಿಸಿದರು. ನೃತ್ಯಗಾರರ ಮೈ ಮೇಲೆ ರಾಗಾ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರ ಬಿಡಿಸಿದ್ದು ಗಮನ ಸೆಳೆಯಿತು. ದೇಶಭಕ್ತಿ, ಭಾವಗೀತೆ ಹಾಗೂ ಚಿತ್ರ ಗೀತೆಗಳನ್ನು ಪ್ರಸ್ತುತ ಪಡಿಸಲಾಯಿತು. ಪ್ರತಿಯೊಂದು ಹಾಡಿನಲ್ಲೂ ಕಾಂಗ್ರೆಸ್ ಪಕ್ಷದ ಬಾವುಟ ಹಾಗೂ ರಾಹುಲ್​ ಗಾಂಧಿ ಅವರನ್ನ ಮುಖ್ಯವಾಗಿ ಬಿಂಬಿಸಿದ್ದು ವಿಶೇಷವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net