

ನವದೆಹಲಿ: ಇದೇ ಅ.19ರಿಂದ ಭಾರತ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿರುವ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಇದೀಗ ಬಿಗ್ ಶಾಕ್ ಒಂದು ಎದುರಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಬೆನ್ನಲ್ಲೇ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಮ್ ಇಂಡಿಯಾ (IND vs AUS ODI ) ಎದುರು ಭರ್ಜರಿ ಪ್ರದರ್ಶನ ನೀಡುವ ಮುಖೇನ ಸರಣಿ ವಶಪಡಿಸಿಕೊಳ್ಳಲು ಪಣತೊಟ್ಟಿರುವ ಆಸೀಸ್ಗೆ ಇಬ್ಬರು ಸ್ಟಾರ್ ಆಟಗಾರರ ಅಲಭ್ಯತೆ ಕಾಡಿದೆ.
ಈಗಾಗಲೇ ಏಕದಿನ ಮತ್ತು ಟಿ20 ಸರಣಿ ಎರಡಕ್ಕೂ ಪ್ರತ್ಯೇಕ ತಂಡಗಳನ್ನು ಭಾರತ ಮತ್ತು ಆಸ್ಟ್ರೇಲಿಯಾ ಘೋಷಿಸಿವೆ. ಆದಾಗ್ಯೂ, ಮೊದಲ ಏಕದಿನ ಪಂದ್ಯಕ್ಕೂ ಮುನ್ನವೇ ತಂಡದಿಂದ ಸ್ಟಾರ್ ಆಟಗಾರರಾದ ಜೋಶ್ ಇಂಗ್ಲಿಸ್ ಮತ್ತು ಆ್ಯಡಮ್ ಜಂಪಾ ಹೊರಗುಳಿದಿದ್ದಾರೆ. ಇವರಿಬ್ಬರ ಸ್ಥಾನಕ್ಕೆ ಮ್ಯಾಥ್ಯೂ ಕುಹ್ನೆಮನ್ ಮತ್ತು ಜೋಶ್ ಫಿಲಿಪ್ಸ್ರನ್ನು ತರಲಾಗಿದೆ. ಈ ಬಗ್ಗೆ ಆಸ್ಟ್ರೇಲಿಯಾ ಕೋಚ್ ಸ್ಪಷ್ಟಪಡಿಸಿದ್ದಾರೆ.
ಜಂಪಾ ಅವರ ಪತ್ನಿ ಎರಡನೇ ಮಗುವಿನ ನಿರೀಕ್ಷೆಯಲ್ಲಿರುವುದರಿಂದ ನ್ಯೂ ಸೌತ್ ವೇಲ್ಸ್‌ನಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ಪರಿಸ್ಥಿತಿಯಲ್ಲಿ ಜಂಪಾಗೆ ಸಮಯದ ಅವಕಾಶದ ಅಗತ್ಯವಿರುವ ಹಿನ್ನೆಲೆ ಅವರನ್ನು ಮೊದಲ ಪಂದ್ಯದಿಂದ ಮಾತ್ರ ಕೈಬಿಡಲು ತಂಡ ನಿರ್ಧರಿಸಿದೆ. ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಿಗೆ ಅವರು ತಂಡಕ್ಕೆ ಮರಳಲಿದ್ದಾರೆ ಎನ್ನಲಾಗಿದೆ.
ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಮ್ಯಾಟ್ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್