

ಯಳಂದೂರು: ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳಿಂದ ದೇವರ ದರ್ಶನಕ್ಕೆ ಭಕ್ತರು ಹೋಗಿ ದರ್ಶನ ಮುಗಿಸಿಕೊಂಡು ಯಳಂದೂರು ಮಾರ್ಗವಾಗಿ ಬರುತ್ತಿದ್ದ ವೇಳೆ ಬಿಳಿಗಿರಿರಂಗನ ಬೆಟ್ಟದ ಗವಿ ಬೋರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಅಪಘಾತವಾಗಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ, ಈ ಘಟನೆಯಲ್ಲಿ ನಲವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಇವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ವಹಿಸಿದ್ದಾರೆ.