

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್-8ರ ಖ್ಯಾತಿಯ ದಿವ್ಯಾ ಸುರೇಶ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಉತ್ತರಹಳ್ಳಿ ಮೇನ್ ರೋಡ್ನಲ್ಲಿ ಈ ಅಪಘಾತ ಸಂಭವಿಸಿದೆ.
ಸೋಮವಾರ ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರೊನಾ ವ್ಯಾಕ್ಸಿನ್ ತೆಗೆದುಕೊಂಡು ದಿವ್ಯಾ ಸುರೇಶ್ ಮನೆಗೆ ವಾಪಸ್ ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಉತ್ತರಹಳ್ಳಿ ಮೇನ್ ರೋಡ್ನಲ್ಲಿ ನಾಲ್ಕೈದು ನಾಯಿಗಳು ಇವರ ಬೈಕ್ಗೆ ಅಡ್ಡ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಸಮೇತ ದಿವ್ಯಾ ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಕೂಡಲೇ ಆಸ್ಪತ್ರೆಗೆ ದಾಖಲಾದ ದಿವ್ಯಾ, ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಯಲ್ಲೇ ರೆಸ್ಟ್ ಮಾಡುತ್ತಿದ್ದಾರೆ. ಇನ್ನೂ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.