More

    ಕಳಪೆ ಹೆಲ್ಮೆಟ್​ ಧರಿಸಿದ್ದ ಬೈಕ್​ ಸವಾರನಿಂದ ದಂಡ ಪಡೆದ ಕಾನ್​ಸ್ಟೇಬಲ್​ ಅಮಾನತು

    ಬೆಂಗಳೂರು: ಕಳಪೆ ಹೆಲ್ಮೆಟ್​ ಧರಿಸಿದ್ದ ಬೈಕ್​ ಸವಾರನಿಂದ 100 ರೂ. ದಂಡ ಪಡೆದು ನಂತರ ವಾಪಸ್​ ಕೊಟ್ಟ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.

    ಎಚ್​ಎಎಲ್​ ಸಂಚಾರ ಠಾಣೆ ಕಾನ್​ಸ್ಟೇಬಲ್​ ಪವನ್​ ದ್ಯಾಮಣ್ಣನವರ್​ ಅಮಾನತಿಗೆ ಒಳಗಾದವರು. ಕಳಪೆ ಹೆಲ್ಮೆಟ್​ ಧರಿಸಿದ್ದ ಬೈಕ್​ ಸವಾರನಿಂದ 100 ರೂ. ದಂಡ ಪಡೆದಿದ್ದರು. ಬೈಕ್​ ಸವಾರ ಆಕ್ಷೇಪ ವ್ಯಕ್ತಪಡಿಸಿದ ಕಾರಣ ದಂಡವನ್ನು ಪೇದೆ ವಾಪಸ್​ ಕೊಟ್ಟಿದ್ದರು. ಈ ವಿಡಿಯೋ ಜಾಲತಾಣದಲ್ಲಿ ವೈರಲ್​ ಆಗಿತ್ತು.

    ಸ್ಥಳದಲ್ಲಿ ದಂಡ ವಿಧಿಸುವ ಅಧಿಕಾರ ಎಎಸ್​ಐ ಮತ್ತು ಮೇಲ್ದರ್ಜೆ ಅಧಿಕಾರಿಗಳಿಗೆ ಮಾತ್ರ ನೀಡಲಾಗಿದೆ. ಕಾನ್​ಸ್ಟೇಬಲ್​ ಮತ್ತು ಹೆಡ್​ ಕಾನ್​ಸ್ಟೇಬಲ್​ಗಳಿಗೆ ಈ ಅಧಿಕಾರ ಇಲ್ಲ. 15 ದಿನಗಳಿಂದ ಐಎಸ್​ಐ ಗುಣಮಟ್ಟದ ಹೆಲ್ಮೆಟ್​ ಧರಿಸುವಂತೆ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಆದರೆ, ಇಲ್ಲಿಯವರೆಗೂ ಸವಾರರಿಗೆ ದಂಡ ವಿಧಿಸುವಂತೆ ಯಾವುದೇ ಆದೇಶ ನೀಡಿಲ್ಲ. ಆಂತರಿಕ ವರದಿ ಪಡೆಯಲಾಗಿದೆ. ಕಾನ್​ಸ್ಟೇಬಲ್​ ತಪ್ಪು ಮಾಡಿರುವುದು ಕಂಡುಬಂದಿದೆ ಎಂದು ಜಂಟಿ ಪೊಲೀಸ್​ ಆಯುಕ್ತ (ಸಂಚಾರ) ಡಾ.ಬಿ.ಆರ್​. ರವಿಕಾಂತೇಗೌಡ ತಿಳಿಸಿದ್ದಾರೆ.

    ಇನ್ಮುಂದೆ ಪೊಲೀಸರು ರಸ್ತೆಯಲ್ಲಿ ವಾಹನಗಳಿಗೆ ಅಡ್ಡ ಹಾಕೋಲ್ಲ!

    ಬೆಂಗ್ಳೂರಲ್ಲಿ ವೈಫ್ ಸ್ವಾಪಿಂಗ್ ದಂಧೆ: ತನ್ನ ಪತ್ನಿ ಜತೆ ಪರಪುರುಷರ ಸಮ್ಮಿಲನ ಮಾಡಿಸಿ ಲೈವ್ ವಿಡಿಯೋ ಮಾಡಿ ಖುಷಿ ಪಡ್ತಿದ್ದ ಗಂಡ!

    ಮಗಳ ಜತೆ ತಾಯಿ ಆತ್ಮಹತ್ಯೆ! 10 ದಿನದ ಹಿಂದೆ ವಿದ್ಯಾರ್ಥಿನಿಯೊಬ್ಬಳ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡದ್ದೇ ಮುಳುವಾಯ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts